Coastal Bulletin

ಬಂಟ್ವಾಳ :ಕಾಂಗ್ರೆಸ್ ಪಕ್ಷದ ವತಿಯಿಂದ,ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಶುಕ್ರವಾರ ಪೊಳಲಿ ಸಮೀಪದ ಪುಂಚಮೆಯಲ್ಲಿ ಆರಂಭಗೊಂಡ “ಬಂಟ್ವಾಳ ಪ್ರಜಾಧ್ವನಿ” ಯಾತ್ರೆ ಕರಿಯಂಗಳ, ಬಡಗಬೆಳ್ಳೂರು, ತೆಂಕಬೆಳ್ಳೂರು, ಅಮ್ಮುಂಜೆ ಗ್ರಾಮಗಳಲ್ಲಿ ಸಂಚರಿಸಿ ಸಂಜೆ ವೇಳೆ ಬಡಕಬೈಲು ಜಂಕ್ಷನ್ನಿನಲ್ಲಿ ನಡೆದ ಸಾರ್ವಜನಿಕ ಸಭೆ ನಡೆಯಿತು.

ವಿಧಾನ ಪರಿಷತ್ ಸದಸ್ಯ ಡಾ ಮಂಜುನಾಥ ಭಂಡಾರಿ ಆವರು ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿ, ಬಿಜೆಪಿಗರಿಗೆ ಭಾವನಾತ್ಮಕ ವಿಷಯಗಳೇ ಚುನಾವಣಾ ವಸ್ತುವಾಗಿದ್ದು ಅಭಿವೃದ್ದಿಪರ ಚಿಂತನೆಗಳೇ ಇಲ್ಲ.ಭ್ರಷ್ಟಾಚಾರವೆ ಬಿಜೆಪಿ ಯ ಸಾಧನೆ,ಈ ಬಾರಿಯೂ ಕಾಂಗ್ರೆಸ್ ಪಕ್ಷ ರಾಜ್ಯದ ಜನರಿಗೆ ಉಪಯುಕ್ತ ಕೊಡುಗೆಗಳನ್ನು ಘೋಷಿಸಿದ್ದು, ಅಧಿಕಾರಕ್ಕೆ ಬಂದ ತಕ್ಷಣ ಎಲ್ಲವೂ ಜಾರಿಯಾಗಲಿದೆ. ಪಕ್ಷದ ನಾಯಕರು, ಕಾರ್ಯಕರ್ತರು ಕಾಂಗ್ರೆಸ್ ಘೋಷಿಸಿದ ಯೋಜನೆಗಳನ್ನು ಪ್ರತಿ ಮನೆಗೂ ಮನ ಮುಟ್ಟುವಂತೆ ತಿಳಿ ಹೇಳಬೇಕು ಎಂದು ಹೇಳಿದರು.

ಮಾಜಿ ಸಚಿವ ಬಿ ರಮಾನಾಥ ರೈ ಮಾತನಾಡಿ, ಕರಿಯಂಗಳ, ಬಡಗಬೆಳ್ಳೂರು, ತೆಂಕಬೆಳ್ಳೂರು, ಅಮ್ಮುಂಜೆ ಗ್ರಾಮಗಳಲ್ಲಿ ತನ್ನ ಅವಧಿಯಲ್ಲಿ ಪ್ರಾಮಾಣಿಕ ಕೆಲಸವನ್ನು ಮಾಡಿದ್ದು ಹಲವು ಜನಪರ ಅಭಿವೃದ್ದಿ ಕಾಮಗಾರಿಗಳ

ನೆನಪು ಜನರ ಮಾಡಿದರು . 

ಯಾತ್ರೆಯ ಸಂಚಾಲಕ ಪಿಯೂಸ್ ಎಲ್. ರೋಡ್ರಿಗಸ್, ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಪದ್ಮಶೇಖರ್ ಜೈನ್, ಎಡ್ತೂರು ರಾಜೀವ ಶೆಟ್ಟಿ, ಎಂ ಎಸ್ ಮುಹಮ್ಮದ್, ಚಿತ್ತರಂಜನ್ ಶೆಟ್ಟಿ ಬೊಂಡಾಲ,ರಾಜೇಶ್ ರೋಡ್ರಿಗಸ್, ಇಬ್ರಾಹಿಂ ನವಾಝ್ ಬಡಕಬೈಲು, ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಸದಾಶಿವ ಬಂಗೇರ, ಚಂದ್ರಹಾಸ ಪಲ್ಲಿಪಾಡಿ, ಬಾಲಕೃಷ್ಣ ಆಳ್ವ ಕೊಡಾಜೆ, ಕೆ ಪದ್ಮನಾಭ ರೈ, ಡೆಂಜಿಲ್,ಮಲ್ಲಿಕಾ ಶೆಟ್ಟಿ, ಸುರೇಶ್ ಜೋರ, ಅರ್ಶದ್ ಸರವು, ಚಂದ್ರಶೇಖರ ಪೂಜಾರಿ, ಚಂದ್ರಶೇಖರ ಭಂಡಾರಿ, ಜಯಂತಿ ವಿ ಪೂಜಾರಿ, ಲವೀನಾ ವಿಲ್ಮಾ ಮೊರಾಸ್, ಮತ್ತಿತರರು ಉಪಸ್ಥಿತರಿದ್ದರು.

Leave a Comment