ಪೊಳಲಿ:ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ನವರಾತ್ರಿ ಉತ್ಸವ ಆರಂಭ.ಅಪಾರ ಭಕ್ತ ಸಂದಣಿ.

Coastal Bulletin
ಪೊಳಲಿ:ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ನವರಾತ್ರಿ ಉತ್ಸವ ಆರಂಭ.ಅಪಾರ ಭಕ್ತ ಸಂದಣಿ.

ಬಂಟ್ವಾಳ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಅ. 22 ರ ವರೆಗೆ ನಡೆಯಲಿರುವ 'ನವರಾತ್ರಿ ಉತ್ಸವ'ಕ್ಕೆ ಚಾಲನೆ ನೀಡಲಾಯಿತು.ಕ್ಷೇತ್ರದಲ್ಲಿ ನವರಾತ್ರಿ ಉತ್ಸವ ಆರಂಭಗೊಂಡ ಹಿನ್ನಲೆಯಲ್ಲಿ ಅಪಾರ ಭಕ್ತ ಸಂದಣಿ ಕಂಡು ಬಂತು.

ನವರಾತ್ರಿಯ ಪ್ರತಿದಿನ ವೈದಿಕ ವಿಧಿವಿಧಾನ, ಭಜನೆ, ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

ಈ ಸಂದರ್ಭ ಶಾಸಕ ರಾಜೇಶ್ ನ್ಯಾಕ್ ಉಳಿಪಾಡಿಗುತ್ತು, ದೇವಳದ ಮೊತ್ತೇಸರರಾದ ಚೇರ ಸೂರ್ಯನಾರಾಯಣ ರಾವ್,

ದೇವಳದ ಅನುವಂಶಿಕ ಮೊತ್ತೇಸರ ಪವಿತ್ರಪಾಣಿ ಮಾಧವ ಭಟ್, ನಾರಾಯಣ ಭಟ್, ಕೆ.ರಾಮ್ ಭಟ್, ಪರಮೇಶ್ವರ ಭಟ್ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಹಾಗೂ ಸಾವಿರ ಸೀಮೆಯ ಭಕ್ತಾದಿಗಳು ಉಪಸ್ಥಿತರಿದ್ದರು.

Leave a Comment