ಬಂಟ್ವಾಳ: ಇಲ್ಲಿನ ಪಾಣೆಮಂಗಳೂರು ಗ್ರಾಮದ ಬೊಂಡಾಲ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ, ನಾಗಪ್ರತಿಷ್ಠೆ ಹಾಗೂ ಅಷ್ಟೋತ್ತರ ಶತ(108) ನಾಳಿಕೇರ ಗಣಪತಿ ಯಾಗವು ಇದೇ 22 ರಿಂದ 26ರ ತನಕ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ ಹೇಳಿದ್ದಾರೆ.
ದೇವಳದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ವೇದಮೂರ್ತಿ ಮುನಿಯೂರು ಕುಮಾರ ಸುಬ್ರಹ್ಮಣ್ಯ ಭಟ್ ಮಾರ್ಗದರ್ಶನ ಮತ್ತು , ಮಾದಕಟ್ಟೆ ಈಶ್ವರ ಭಟ್ ನೇತೃತ್ವದಲ್ಲಿ ವಿವಿಧ ವೈಧಿಕ ವಿಧಿವಿಧಾನಗಳು
ನೆರವೇರಲಿದೆ ಎಂದು ಹೇಳಿದರು. ಸುಮಾರು ರೂ 1 ಕೋಟಿ ವೆಚ್ಚದಲ್ಲಿ ನೂತನ ಶಿಲಾಮಯ ಗರ್ಭಗುಡಿ, ವಿಶೇಷ ವಿನ್ಯಾಸದ ರಾಜಗೋಪುರ, ಪಾಕ ಶಾಲೆ ಹಾಗೂ ನಾಗನಕಟ್ಟೆ ನಿರ್ಮಾಣಗೊಂಡಿದೆ ಎಂದರು.














