ಬಂಟ್ವಾಳ :ತಾಲ್ಲೂಕಿನ ಸಿದ್ಧಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ಥಳೀಯ ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ಇವರನ್ನು ಬುಧವಾರ ಸನ್ಮಾನಿಸಿ ಗೌರವಿಸಿದರು
ಪತ್ರಿಕಾ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮದ ದಲ್ಲಿ ರೋಟರಿ ಕ್ಲಬ್ಬಿನ ಅಧ್ಯಕ್ಷ ಮೈಕೆಲ್ ಡಿ ಕೊಸ್ತಾ ಅಧ್ಯಕ್ಷತೆ ವಹಿಸಿದ್ದರು.ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಣೇಶ ಶೆಟ್ಟಿ,ಶಿಕ್ಷಕ
ರಾಜೇಶ ನೆಲ್ಯಾಡಿ ಶುಭ ಹಾರೈಸಿದರು.ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ ಮತ್ತಿತರರು ಇದ್ದರು.ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ ಆಚಾರ್ಯ ರಾಯಿ ಸ್ವಾಗತಿಸಿ, ವಂದಿಸಿದರು.
---















