Coastal Bulletin

ಬಂಟ್ವಾಳ : ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಆಯೋಜಿಸಿದ್ದ ಜೀರ್ಣೋದ್ಧಾರ ಕಾರ್ಯಗಳಿಗೆ ಗುದ್ದಲಿಪೂಜೆ ಮತ್ತು ಶ್ರಮಿಕರ ಸಮಾವೇಶವು ಭಾನುವಾರ ನಡೆಯಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ತೇವು ತಾರನಾಥ ಕೊಟ್ಟಾರಿ ಮಾತನಾಡುತ್ತ,ಬ್ರಹ್ಮಕಲಶ ಪ್ರಯುಕ್ತ ಜೀರ್ಣೋದ್ಧಾರ ಕಾರ್ಯಗಳನ್ನು ಶ್ರಮಿಕರ ಸಹಕಾರದಿಂದ ಸೇವಾರೂಪದಲ್ಲಿ ಕೈಗೊಳ್ಳಲು ಸಮಿತಿ ಯೋಜನೆ ರೂಪಿಸಿದೆ. ಕ್ರಿಯೆಗೆ ಭಯಭಕ್ತಿ ಸೇರಿದಾಗ ಅದು ಸೇವಾರೂಪವನ್ನು ಪಡೆಯುತ್ತದೆ. ಇದರಿಂದ ಆರ್ಥಿಕ ಹೊರೆಯನ್ನೂ ತಪ್ಪಿಸಬಹುದು ಜೊತೆಗೆ ಕಾರ್ಮಿಕರಿಗೂ ತನುಮನದ ಸೇವೆ ಸಲ್ಲಿಸುವ ಸಂತೃಪ್ತಿ ದೊರೆಯುವುದು ಎಂದು ಅವರು ನುಡಿದರು.

.ದೇವಾಲಯಗಳ ಅಭಿವೃದ್ಧಿಯಿಂದ ಹಿಂದೂ ಸಮಾಜದ ಅಭಿವೃದ್ಧಿ ಸಾಧ್ಯ. ದೇವಾಲಯಗಳು ಸಂಸ್ಕಾರ ನೀಡುವ ಕೇಂದ್ರಗಳಾಗಿದ್ದು, ಇದರ ಅಭಿವೃದ್ಧಿಗೆ ಶ್ರಮಿಕರ ಸಂಪೂರ್ಣ ಸಹಕಾರ ಅತ್ಯಗತ್ಯ ಎಂದು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಉಪಾಧ್ಯಾಯ ವಿನಂತಿಸಿದರು.

ಸುಮಾರು 70ಕ್ಕೂ ಅಧಿಕ

ಕಾರ್ಮಿಕರು ಶ್ರಮಿಕರ ಸಮಾವೇಶದಲ್ಲಿ ಪಾಲ್ಗೊಂಡು ತಮ್ಮ ಬೆಂಬಲ ಸೂಚಿಸಿದರು. 17 ತಂಡಗಳನ್ನು ರಚಿಸಿ ಕಾರ್ಮಿಕರಿಗೆ ಜವಾಬ್ದಾರಿ ಹಸ್ತಾಂತರಿಸಲಾಯಿತು. ದೇವಸ್ಥಾನದ ಅರ್ಚಕ ರಾಧಾಕೃಷ್ಣ ಕಡಂಬಳಿತ್ತಾಯ ವೈದಿಕ ವಿಧಿವಿಧಾನ ನೆರವೇರಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ರಂಗೋಲಿ ಗುದ್ದಲಿಪೂಜೆ ನೆರವೇರಿಸಿದರು.

ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ ದಾಮೋದರ ನೆತ್ತರಕೆರೆ ಕಾರ್ಯಕ್ರಮ ನಿರೂಪಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಗಣೇಶ್ ಸುವರ್ಣ ತುಂಬೆ, ಕೋಶಾಧಿಕಾರಿ ಕವಿರಾಜ್ ಚಂದ್ರಿಗೆ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ದಿವಾಕರ ಶೆಟ್ಟಿ ಕುಪ್ಪಿಲ, ಸತೀಶ್ ಶೆಟ್ಟಿ ಮೊಡಂಕಾಪು, ಪುರುಷೋತ್ತಮ ಕೊಟ್ಟಾರಿ ಮಾಡಂಗೆ, ಅಮಿತಾ ವಿಶ್ವನಾಥ್ ದಾಸರಕೋಡಿ ಮತ್ತಿತರರು ಉಪಸ್ಥಿತರಿದ್ದರು.


Leave a Comment