ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ನಾಳೆ ಬಂಟ್ವಾಳದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನೇತ್ರತ್ವದ ಬಂಟ್ವಾಳ ಬಿಜೆಪಿ ವತಿಯಿಂದ ನಡೆದ "ಗ್ರಾಮವಿಕಾಸ ಯಾತ್ರೆ," "ಶಾಸಕರ ನಡೆ ಗ್ರಾಮದೆಡೆಗೆ "ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆಗೆ ಮಂಗಳೂರಿಗೆ ಆಗಮಿಸಲಿದ್ದಾರೆ. ಉಡುಪಿ ಜಿಲ್ಲೆ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಸ್. ಪಿ.ಯಾಗಿ ಕರ್ತವ್ಯ ನಿರ್ವಹಿಸಿದ ಅಣ್ಣಾಮಲೈ ಅವರು ದ.ಕ.ಜಿಲ್ಲೆಯಲ್ಲಿ ನಡೆದ ಕೋಮು ಗಲಭೆ ಸಂದರ್ಭದಲ್ಲಿ ವಿಶೇಷ ಕರ್ತವ್ಯ ಮಾಡಿದ್ದರು. ಸರಕಾರಿ ನೌಕರಿ ತೊರೆದು ರಾಜಕೀಯ ಪ್ರವೇಶ ಮಾಡಿದ ಅಣ್ಣಾಮಲೈ ಅವರು ತಮಿಳುನಾಡಿನ ನಾಯಕನಾಗಿ ಹೊರಹೊಮ್ಮುತ್ತಿದ್ದಾರೆ.
ಯುವಕರ ಕಣ್ಮನಿಯಾಗಿ ತಮಿಳುನಾಡಿನಲ್ಲಿ ಬಿಜೆಪಿಯನ್ನು ಭದ್ರಗೊಳಿಸುತ್ತಿರುವ ಯುವ ನಾಯಕ ನಾಳೆ
ಬಂಟ್ವಾಳದಲ್ಲಿ ನಡೆಯುವ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲು ಮುಂಚಿತವಾಗಿ ಇಂದೇ ಮಂಗಳೂರಿಗೆ ಆಗಮಿಸಲಿರುವರು.














