ಮಂಗಳೂರು: ದಿನೇ ದಿನೇ ಕೊರೊನಾ ದ ಅಬ್ಬರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವಿಧಿಸಿರುವ ವಾರಾಂತ್ಯ ಕರ್ಫ್ಯೂ ಶುಕ್ರವಾರ ರಾತ್ರಿಯಿಂದ 10ರಿಂದ ಆರಂಭಗೊಳ್ಳಲಿದ್ದು ಸೋಮವಾರ ಬೆಳಗ್ಗೆ 5ರ ವರೆಗೆ ಜಾರಿಯಲ್ಲಿರುತ್ತದೆ.
ದ. ಕ. ಜಿಲ್ಲೆಯಲ್ಲಿ ಈ ವಾರಾಂತ್ಯ ಕರ್ಫ್ಯೂನಲ್ಲಿ
ಮದುವೆಗೆ ಒಳಾಂಗಣದಲ್ಲಿ 100 ಹಾಗೂ ಹೋರಾಂಗಣದಲ್ಲಿ 200 ಮಂದಿಗೆ ಅವಕಾಶ ನೀಡಲಾಗಿದೆ. ಹರಕೆ ಯಕ್ಷಗಾನವನ್ನು 100 ಜನರಿಗೆ ಸೀಮಿತಗೊಳಿಸಿ ಕೌಟುಂಬಿಕ ಕಾರ್ಯಕ್ರಮಗಳನ್ನು ನಡೆಸಬಹುದು . ಇತರ ಯಾವುದೇ ಕಾರ್ಯಕ್ರಮಗಳಿಗೆ ರಿಯಾಯಿತಿ ಇಲ್ಲ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಬೂತ್‌ಗಳು ಮತ್ತು ಪ್ರಾಣಿಗಳ ಮೇವು ವ್ಯವಹಾರ ಅಂಗಡಿಗಳು , ಸಾರ್ವಜನಿಕ
ವಿತರಣ ವ್ಯವಸ್ಥೆಯ ಅಂಗಡಿಗಳು, ಬೀದಿಬದಿ ವ್ಯಾಪಾರಿಗಳಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದ್ದು, ಹೊಟೇಲ್, ರೆಸ್ಟೋರೆಂಟ್‌ಗಳಲ್ಲಿ ಪಾರ್ಸೆಲ್‌ಗಳಿಗೆ ಮಾತ್ರ ಅವಕಾಶವಿದೆ. ಎಲ್ಲ ಸಾರ್ವಜನಿಕ ಉದ್ಯಾನವನಗಳನ್ನು ಮುಚ್ಚಲಾಗುತ್ತಿದೆ.
ಬಸ್, ರೈಲು ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ. ಜಿಲ್ಲೆಯಲ್ಲಿ ಸಿಟಿ ಬಸ್, ಸರ್ವಿಸ್ ಬಸ್‌ಗಳ ಸಂಚಾರಕ್ಕೆ ಅನುಮತಿ ನೀಡಿದ್ದು , ಕೆಲವು ಕೊರೋನಾ ನಿಯಮಗಳನ್ನು ಪ್ರಯಾಣಿಕರು ಪಾಲಿಸಬೇಕು.
ಮಂಗಳೂರು, ದ.ಕ. ಜಿಲ್ಲೆಯಲ್ಲಿ ಇದುವರೆಗೆ ಕೊರೊನಾದ ಸಂಖ್ಯೆ ಮಕ್ಕಳಲ್ಲಿ ಕಂಡುಬಂದಿಲ್ಲ ; ಹಾಗಾಗಿ ಶಾಲೆಯನ್ನು ಲಾಕ್‌ಡೌನ್ ಮಾಡುವ ಅನಿವಾರ್ಯ ಇಲ್ಲ ಎಂದಿದ್ದಾರೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ.













