ಬಂಟ್ವಾಳ :ಶ್ರೀ ಕೃಷ್ಣ ಮಂದಿರ (ರಿ.) ಅಮ್ಟೂರು ಇದರ 26ನೇ ವಾರ್ಷಿಕೋತ್ಸವ ಸಮಾರಂಭವು ಗಣ ಹೋಮ, ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆಯೊಂದಿಗೆ ಇತ್ತೀಚೆಗೆ ನಡೆಯಿತು.
ಶ್ರೀ ಅನಂತರಾಮ ಐತಾಳ್ ಓಣಿಬೈಲು ಇವರ ನೇತೃತ್ವದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆದು ಬಳಿಕ ಈ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
ಧಾರ್ಮಿಕ ಸಭೆಯಲ್ಲಿ ಶ್ರೀ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ಕಮಲಾದೇವಿ ಪ್ರಸಾದ್ ಅಸ್ರಣ್ಣನವರು ಆಶೀರ್ವಚನ ನೀಡಿದರು, ಶ್ರೀ ಪಾವಂಜೆ ಮೇಳದ ಯಕ್ಷಗಾನ ಕಲಾವಿದ ಶ್ರೀ ದಿನೇಶ್ ಶೆಟ್ಟಿ ಕಾವಳಕಟ್ಟೆ ಧಾರ್ಮಿಕ ಉಪನ್ಯಾಸವನ್ನು ನೀಡಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿಪರ ಕೃಷಿಕರು ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲೆಯ ಉಪಾಧ್ಯಕ್ಷರಾದ ಪ್ರಸನ್ನಕುಮಾರ್ ಮಾರ್ತಾ ವಹಿಸಿದ್ದರು.
ಬಂಟ್ವಾಳ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ ಗುತ್ತು. ಜಿತೇಂದ್ರ ಶೆಟ್ಟಿ ತಲಪಾಡಿ ಗುತ್ತು ಆಡಳಿತ ನಿರ್ದೇಶಕರು
ಭೀಮಲಕ್ಷ್ಮಿ ಪ್ರೈವೇಟ್ ಲಿಮಿಟೆಡ್, ಕಿಶೋರ್ ಕುಮಾರ್ ಕಟ್ಟೆಮಾರ್ ಉದ್ಯಮಿ ,ಕರುಣಾಕರ ಶೆಟ್ಟಿ, ಮಾಲಕರು ಹೋಟೆಲ್ ಸಮುದ್ರ ಕಲ್ಲಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.
ಶ್ರೀಕೃಷ್ಣ ಮಂದಿರದ ಗೌರವಾಧ್ಯಕ್ಷ ಶಂಕರನಾರಾಯಣ ಐತಾಳ್, ಅಧ್ಯಕ್ಷ ಭಾಸ್ಕರ ಪೂಜಾರಿ ಪೊಯ್ಯಕಂಡ ಗೌರವ ಸಲಹೆಗಾರ ರಮೇಶ್ ಶೆಟ್ಟಿಗಾರ್ ಕರೀಂಗಾಣ ಜ್ಯೋತಿ ಮಹಿಳಾ ಮಂಡಲದ ಅಧ್ಯಕ್ಷೆ ಲಕ್ಷ್ಮಿ ಪ್ರಭು ಹಿರಿಯರಾದ ನಂದಗೋಕುಲ ಮಹಾಬಲ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಆಮ್ಟೂರು ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿ ಸಾಧಕರನ್ನ ಸನ್ಮಾನಿಸಲಾಯಿತು,
ತಾ ಪಂ ಮಾಜಿ ಉಪಾಧ್ಯಕ್ಷ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ದಿನೇಶ್ ಅಮ್ಟೂರು ಸ್ವಾಗತಿಸಿ,ಕಾರ್ಯದರ್ಶಿ ಕುಶಾಲಪ್ಪ ವಂದಿಸಿದರು ಗೋಳ್ತಮಜಲು ಗ್ರಾ ಪಂ ಸದಸ್ಯ ರಾಜೇಶ್ ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು.











