ಬಂಟ್ವಾಳ: ಬೀದರ್ ಜಿಲ್ಲೆಯ ಹುಮ್ನಾಬಾದ್ ತಹಸೀಲ್ದಾರ್ ಡಾ. ಪ್ರದೀಪ್ ಕುಮಾರ್ ಹಿರೇಮಠ್ ಇವರ ಮೇಲೆ ನಡೆದ ಹಲ್ಲೆ ಖಂಡನೀಯವಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು ಆಗ್ರಹಿಸಿದರು. ಇಲ್ಲಿನ ಸರಕಾರಿ ನೌಕರರ ಸಂಘದ ವತಿಯಿಂದ ಬಿ.ಸಿ.ರೋಡು ಮಿನಿವಿಧಾನಸೌಧದಲ್ಲಿ ತಹಶೀಲ್ದಾರ್ ರಶ್ಮಿ ಎಸ್.ಆರ್.ಇವರಿಗೆ ಮಂಗಳವಾರ ಮನವಿ ಸಲ್ಲಿಸಿ ಅವರು ಮಾತನಾಡಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್, ಸಂಘದ ರಾಜ್ಯ ಪರಿಷತ್ತು ಸದಸ್ಯ ಜನಾರ್ದನ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಅಧ್ಯಾಪಕರ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ನಾಯಕ್ ರಾಯಿ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಜೋಯೆಲ್, ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷ
ಪ್ರಕಾಶ್, ಗ್ರಾಮಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಅನಿಲ್ ಕೆ., ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಜತ್ತಪ್ಪ ಗೌಡ, ಪ್ರಮುಖರಾದ ಬಸಯ್ಯ ಆಲಿಮಟ್ಟಿ, ಮಂಜುನಾಥ್, ನವೀನ್ ಪಿ.ಎಸ್., ಜಯರಾಮ್, ಇಂದುಶೇಖರ, ಯತೀಶ್, ಸುನಿಲ್, ಪುಟ್ಟರಂಗನಾಥ್, ಚಿನ್ನಪ್ಪ ಜಾಲ್ಸೂರು, ನವೀನ್ ಬೆಂಜನಪದವು, ನರೇಂದ್ರನಾಥ್ ಮಿತ್ತೂರು ಮತ್ತಿತರರು ಉಪಸ್ಥಿತರಿದ್ದರು.














