ಪುತ್ತೂರು ::ಫೆ.11ರಂದು ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮ ನಡೆಯಲಿದ್ದು, ಈ ಸಂಬಂಧ ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಮೈದಾನದಲ್ಲಿ ಅಪರಾಹ್ನ 2ರಿಂದ 4.30ರ ತನಕ ಬೃಹತ್ ಸಮಾವೇಶ ನಡೆಯಲಿದೆ.
ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಬಂಧ ವಿವಿಧ ಯೋಜನೆಗಳು ಹಾಗೂ ಇತರ ಕಾರ್ಯಕ್ರಮಗಳಿಗೆ ಅಮಿತ್ ಶಾ ಅವರು ಚಾಲನೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯದ ಮುಖ್ಯಮಂತ್ರಿ ಸಹಿತ ಹಲವು ಸಚಿವರು, ಬಿಜೆಪಿ ನಾಯಕರು, ಮುಂಬರುವ ಚುನಾವಣೆಯ ಟಿಕೆಟ್
ಆಕಾಂಕ್ಷಿಗಳು ಸೇರಿದಂತೆ ಬಿಜೆಪಿ ನಾಯಕರು ಸಮಾವೇಶಕ್ಕೆ ಆಗಮಿಸಲಿದ್ದಾರೆ.
ವಿವೇಕಾನಂದ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಕಾಲೇಜು ಮೈದಾನದಲ್ಲಿ ಫೆ.10ರಿಂದ 12ರ ತನಕ ನಡೆಯಲಿರುವ ಕೃಷಿ ಯಂತ್ರ ಮೇಳ ಮತ್ತು ಕನಸಿನ ಮನೆ ಕಾರ್ಯಕ್ರಮಕ್ಕೂ ಅವರು ಭೇಟಿ ನೀಡುವ ಸಾಧ್ಯತೆ ಇದೆ.















