ಬಂಟ್ವಾಳ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಬಿ.ಸಿ.ರೋಡಿನ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಮಂಗಳವಾರ ಶಿವಶರಣ ಜಯಂತಿ ಆಚರಣೆ ನಡೆಯೊತು. ಉಪತಹಸೀಲ್ದಾರ್ ರಾಜೇಶ್ ನಾಯ್ಕ್ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಬಳಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು 12 ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿಗೆ ಕಾರಣಕರ್ತರಾದ ಶಿವಶರಣರು ಅಸಮಾನತೆಗಳನ್ನು ತೊಲಗಿಸಲು ಪ್ರಯತ್ನಿಸಿದರು. ಆಡು ಭಾಷೆಯಲ್ಲಿ ವಚನಗಳನ್ನು ರಚಿಸಿ ಜನರ ಮನಃ ಪರಿವರ್ತಿಸುವ ಕೆಲಸ ಮಾಡಿದರು ಎಂದು ಹೇಳಿದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್,ತಾಲೂಕು ಕಚೇರಿ ಸಿಬ್ಬಂದಿಗಳು.
ಗ್ರಾಮ ಲೆಕ್ಕಾಧಿಕಾರಿಗಳು. ಗ್ರಾಮ ಸಹಾಯಕರು. ಸಾರ್ವಜನಿಕರು ಉಪಸ್ಥಿತರಿದ್ದರು.
ಚುನಾವಣಾ ಶಾಖೆಯ ನಾರಾಯಣ ಗೌಡ ಸ್ವಾಗತಿಸಿ ವಂದಿಸಿದರು.














