Coastal Bulletin

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಇಂಟಕ್ ವಿಭಾಗದ ಅಧ್ಯಕ್ಷರಾದ ಡಾ.ಜಿ. ಸಂಜೀವ್ ರೆಡ್ಡಿ ಅವರ ಆದೇಶ, ರಾಷ್ಟ್ರೀಯ ಇಂಟಕ್ ವರಿಷ್ಠರಾದ ಎನ್.ಎಂ. ಅಡ್ಯಂತಾಯ ಅವರ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್ ಅವರ ಅನುಮತಿ ಮೇರೆಗ ದ.ಕ. ಜಿಲ್ಲಾ ಇಂಟಕ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಚಿತ್ತರಂಜನ್ ಶೆಟ್ಟಿ ಬೊಂಡಾಲ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಲಾಗಿದೆ.

ಚಿತ್ತರಂಜನ್ ಶೆಟ್ಟಿ ಅವರು ಈ ಹಿಂದೆ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಸೇವಾದಳದ

ಕಾರ್ಯದರ್ಶಿ, ಬಂಟ್ವಾಳ ಇಂಟಕ್ ಕಾರ್ಯದರ್ಶಿ, ಜಿಲ್ಲಾ ಇಂಟಕ್ ಪ್ರಧಾನ ಕಾರ್ಯದರ್ಶಿ, ಕೆಪಿಸಿಸಿ ಸಂಯೋಕರಾಗಿ ಸೇವೆ ಸಲ್ಲಿಸಿದ್ದಾರೆ.

Leave a Comment