ಬಂಟ್ವಾಳ: ಬಿ.ಸಿ.ರೋಡಿನ ಕೇಂದ್ರಭಾಗದಲ್ಲಿರುವ ಶ್ರೀ ರಕ್ತೇಶ್ವರೀ ದೇವಿ ಸನ್ನಿಧಿಯಲ್ಲಿ ಎ.4ರಿಂದ ಎ.9ರವರೆಗೆ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ನಡೆಯಲಿದ್ದು ಇದರ ಬಾಲಾಲಯ ಪ್ರತಿಷ್ಠೆ ಹಾಗೂ ಆಮಂತ್ರಣ ಪತ್ರಿಕೆಯನ್ನು ಫೆ. 1ರಂದು ಶನಿವಾರ ಶ್ರೀ ರಕ್ತೇಶ್ವರೀ ದೇವಿ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಲಾಯಿತು.
ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಪದ್ಮನಾಭ ತಂತ್ರಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ಕಲೆಯ ಉಪಾಸನೆಯೇ ದೇವರ ಉಪಾಸನೆ. ನಮ್ಮನ್ನು ನಾವು ಅರಿತುಕೊಂಡು ಸ್ವತಂತ್ರವಾಗಿ ಬದುಕಬೇಕೆನ್ನುವುದೇ ಸನಾತನ ಧರ್ಮದ ಸಂಸ್ಕೃತಿ. ಶಾಂತಿ, ಆಧ್ಯಾತ್ಮಿಕ ಶಕ್ತಿಗಾಗಿ ಇಂದು ಪ್ರಪಂಚದ ಬೇರೆ ರಾಷ್ಟ್ರಗಳು ಭಾರತ ವನ್ನು ನೋಡುತ್ತಿದೆ. ಆ ನಿಟ್ಟಿನಲ್ಲಿ ಒಂದು ಕ್ಷೇತ್ರ ಬೆಳಗಿದರೆ ಆ ಊರೇ ಅಭಿವೃದ್ದಿಯಾಗುತ್ತದೆ ಎಂದು ಹೇಳಿದರು .
ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ರಮೇಶಾನಂದ ಸೋಮಯಾಜಿ, ಬಂಟ್ವಾಳ ಪುರಸಭೆ ಅಧ್ಯಕ್ಷ ವಾಸು ಪೂಜಾರಿ, ಸಹ ಕಾರ್ಯಧ್ಯಕ್ಷ ಜಗನಾಥ ಚೌಟ ಮಾಣಿ ಬದಿಗುಡ್ಡೆ ಮಾತನಾಡಿ ಬ್ರಹ್ಮಕಲಶಾಭಿಷೇಕದ ಈ ಪುಣ್ಯಕಾರ್ಯಕ್ಕೆ ಎಲ್ಲರೂ ಸಹಕಾರ ಶ್ರೀ ರಕ್ತೇಶ್ವರೀ ದೇವಿ ಸನ್ನಿಧಿ
ಸೇವಾ ಸಮಿತಿ ಅಧ್ಯಕ್ಷ ಬಿ. ವಿಶ್ವನಾಥ, ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ನಾರಾಯಣ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ನ್ಯಾಯವಾದಿ ಅಶ್ವನಿ ಕುಮಾರ್ ರೈ, ಪ್ರಮುಖರಾದ ರಾಜೇಶ್ ಎಲ್. ನಾಯಕ್,ಬಿ.ಮೋಹನ್, ದಿವಾಕರ ಪಂಬದಬೆಟ್ಟು, ಲೋಕನಾಥ ಶೆಟ್ಟಿ, ಸತೀಶ್ ಭಂಡಾರಿ, ಗೋಪಾಲ ಸುವರ್ಣ, ಚಂದ್ರಶೇಖರ ಪೂಜಾರಿ, ಉಮೇಶ್ ಕುಮಾರ್ ವೈ, ಸದಾನಂದ ಶೆಟ್ಟಿ, ರಮೇಶ್ ಸಾಲ್ಯಾನ್, ರವೀಂದ್ರ ಕಂಬಳಿ, ಪ್ರಸಾದ್ ಕುಮಾರ್ ರೈ ಮತ್ತಿತರರು ಉಪಸ್ಥಿತರಿದ್ದರು.
ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಧ್ಯಕ್ಷ ಸಂಜೀವ ಪೂಜಾರಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಐತಪ್ಪ ಪೂಜಾರಿ ವಂದಿಸಿದರು. ಮೋಹನದಾಸ ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು.














