ಬಂಟ್ವಾಳ ಆಡಳಿತ ಸೌದದಲ್ಲಿ ಆಯುಧ ಪೂಜೆ ನವರಾತ್ರಿ ಉತ್ಸವ ಅಂಗವಾಗಿ ಇಂದು ಮಂಗಳವಾರ ಆಯುಧ ಪೂಜಾ ಕಾರ್ಯಕ್ರಮ ನಡೆಯಿತು.
ಅರ್ಚಕ ರಾಘವೇಂದ್ರ ಮಯ್ಯರಬೈಲು ಹಾಗೂ ಸಹಾಯಕ ಅರ್ಚಕರು ಪೂಜಾ ವಿಧಿ ವಿಧಾನ ಕಾರ್ಯಕ್ರಮವನ್ನು ನೆರವೇರಿಸಿದರು.ಈ ಪೂಜಾ ಕಾರ್ಯಕ್ರಮದಲ್ಲಿ ಬಂಟ್ವಾಳ ತಹಶೀಲ್ದಾರ್ ಜಿ.ಮಂಜುನಾಥ್ ಭಾಗವಹಿಸಿ ಜಗನ್ಮಾತೆ ಶ್ರೀ ದುರ್ಗಾ ದೇವಿಯ ಆಶೀರ್ವಾದದಿಂದ ಎಲ್ಲೆಡೆ ಸುಖ,ಶಾಂತಿ, ನೆಮ್ಮದಿ ನೆಲೆಸಲಿ ಎಂದು ಶುಭ ಹಾರೈಸಿ ಎಲ್ಲಾರಿಗೂ
ನವರಾತ್ರಿ ಹಬ್ಬದ ಶುಭಾಶಯ ಕೋರಿದರು.
ಉಪತಹಶೀಲ್ದಾರ್ ನರೇಂದ್ರ ನಾಥ್ ಮಿತ್ತೂರು.ನವೀನ್ ಬೆಂಜನಪದವು, ಶ್ರೀ ನಿಧಿರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಅಧಿಕಾರಿಗಳ, ಗ್ರಾಮ ಸಹಾಯಕರು ಸಾರ್ವಜನಿಕರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು.














