Coastal Bulletin

ಬಂಟ್ವಾಳ: ಬಿ.ಸಿ.ರೋಡು ಮಿನಿವಿಧಾನಸೌಧ ಎದುರು ಸೋಮವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಧ್ವಜವಂದನೆ ಸ್ವೀಕರಿಸಿದರು.

ರಾಜ್ಯದಲ್ಲಿ ಕನ್ನಡ ಭಾಷೆ ಅಭಿವೃದ್ಧಿ ಮತ್ತು ಬೆಳವಣಿಗೆಯಲ್ಲಿ ತುಳುನಾಡಿನ ತುಳುವರ ಕೊಡುಗೆ ಅನನ್ಯವಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದ್ದಾರೆ. 

ಇಲ್ಲಿನ ಬಿ.ಸಿ.ರೋಡು ಮಿನಿವಿಧಾನಸೌಧ ಎದುರು ಸೋಮವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಹಶೀಲ್ದಾರ್ ರಶ್ಮಿ ಎಸ್.ಆರ್. ಧ್ವಜಾರೋಹಣ ನೆರವೇರಿಸಿದರು. 

ಬೆಂಜನಪದವು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಧ್ಯಾಪಕ ಅನಂತ ಪದ್ಮನಾಭ ಶಿಬರೂರು

ಪ್ರಧಾನ ಭಾಷಣ ಮಾಡಿದರು. ಎಎಸ್ಪಿ ಶಿವಾಂಶು ರಜಪೂತ್, ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಬಿಂದಿಯಾ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

ಇದೇ ವೇಳೆ ಪುನೀತ್ ರಾಜ್ ಕುಮಾರ್ ಗೆ ಶ್ರದ್ಧಾಂಜಲಿ ಮತ್ತು ಪೊಲೀಸರಿಂದ ಆಕರ್ಷಕ ಪಥಸಂಚಲನ ನಡೆಯಿತು. 

ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ. ಸ್ವಾಗತಿಸಿ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ದಿನೇಶ್ ವಂದಿಸಿದರು. ಹಿರಿಯ ಕಲಾವಿದ ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

Leave a Comment