ಬಂಟ್ವಾಳ :ಯಕ್ಷಗಾನ ರಂಗದ ಹಿರಿಯ ಅರ್ಥದಾರಿ ತನ್ನದೇ ಶೈಲಿಯಿಂದ ವಿಶಿಷ್ಟ ರೀತಿಯಲ್ಲಿ ಪಾತ್ರ ನಿರ್ವಹಿಸಿ ಜನಮನಗೆದ್ದ ಶಂಭು ಶರ್ಮ ವಿಟ್ಲ (74)ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ಶನಿವಾರ ಮುಂಜಾನೆ 4 ಘಂಟೆಗೆ ವಿಧಿವಶರಾದರು
ಉಪನ್ಯಾಸಕರಾಗಿ, ಯಕ್ಷಗಾನ ಅರ್ಥಧಾರಿಯಾಗಿ ಜನಪ್ರಿಯರಾಗಿದ್ದ ಅವರು ಪ್ರಸ್ತುತ ಪುತ್ತೂರು ಸಮೀಪ ಮುರ ಎಂಬಲ್ಲಿ ವಾಸಿಸುತ್ತಿದ್ದರು.ಶೇಣಿ ಗೋಪಾಲಕೃಷ್ಣ ಭಟ್ ಸಹಿತ ಖ್ಯಾತನಾಮರೊಂದಿಗೆ ಅರ್ಥಗಾರಿಕೆ ಮಾಡಿದ ಅನುಭವಿಯಾಗಿದ್ದ ಶಂಭು ಶರ್ಮಾ, ಯಕ್ಷಗಾನ ತಾಳಮದ್ದಳೆ
ಕ್ಷೇತ್ರದಲ್ಲಿ ಚಿರಪರಿಚಿತ. ಖಳಪಾತ್ರ ಸಹಿತ ಯಾವುದೇ ಪಾತ್ರ ವಹಿಸಿದರೂ ಶಂಭು ಶರ್ಮ ಅವರ ಆರ್ಥಗಾರಿಕೆಗೆ ಅಪಾರ ಅಭಿಮಾನಿಗಳಿದ್ದರು.
ಪತ್ನಿ ಹಾಗೂ ಪುತ್ರ ಹಾಗೂ ಅಪಾರ ಬಂಧು, ಬಾಂಧವರು, ಅಭಿಮಾನಿಗಳನ್ನು ಅವರು ಅಗಲಿದ್ದಾರೆ.















