Coastal Bulletin

ಅಮ್ಮುಂಜೆ ಅನುದಾನಿತ ಹಿಪ್ರಾ ಶಾಲೆಯ ವೀರಯೋಧ ಯಾದವ್ ಪೂಜಾರಿ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷರಾದ ಹಿರಿಯ ಪತ್ರಕರ್ತ ಪ್ರೊ ಕೆ ಬಾಲಕೃಷ್ಣಗಟ್ಟಿ, ದ.ಕ ಕ.ಸಾ.ಪ ಅಧ್ಯಕ್ಷರಾದ ಡಾ ಎಂಪಿ ಶ್ರೀನಾಥ್ ಬಂಟ್ವಾಳ ತಾಲೂಕು ಕ.ಸಾ.ಪ ಅಧ್ಯಕ್ಷರಾದ ವಿಶ್ವನಾಥ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಎಸಿ ಭಂಡಾರಿ ಅವರ ಅಧ್ಯಕ್ಷತೆಯಲ್ಲಿ ಸವಿತಾ ಕೋಡಂದೂರ್ ಅವರನ್ನು ಶಾಲು ,ಹಾರ ,ಪೇಟ, ಸ್ಮರಣಿಕೆ ಪುಸ್ತಕ,ಅಭಿನಂದನಾ ಪತ್ರಗಳನ್ನು ಇಟ್ಟು ಸನ್ಮಾನಿಸಲಾಯಿತು.

ಕಲಾಸಾಧಕಿ ಸವಿತಾ ಕೋಡಂದೂರ್,ಗ್ರಾಮೀಣ ಕಲಾಪ್ರತಿಭೆ: ಕೃಷಿ ಜೊತೆ ಸಂಗೀತ ಶಾಸ್ತ್ರೀಯ, ಸುಗಮ ಸಂಗೀತ, ಸ್ಯಾಕ್ಸೋಫೋನ್ ಜೊತೆ ಗಾನ ವೈಭವ, ಸಪ್ತ ಮಾತೃಕೆಯರ ಗೀತ ಗಾಯನ, ಪುಟಾಣಿ ಮಕ್ಕಳಿಗೆ ಸಂಗೀತ ಶಾಲೆ, ಕುಮಾರ್ ಪೆರ್ನಾಜೆ ಇವರ ಸ್ವರ ಸಿಂಚನ ಕಲಾ ತಂಡದ ಮುಖ್ಯ ಹಾಡುಗಾರ್ತಿಯಾದ ಇವರು ಸಂಗೀತ ಲೋಕಕ್ಕೆ ನಮ್ಮನ್ನೆಲ್ಲಾ ಕರೆದೊಯ್ಯುವುದಲ್ಲದೆ ಪೇಟೆ, ಪಟ್ಟಣದ ಕಲಾವಿದರಿಂದ ತಾನೇನು ಕಡಿಮೆಯಲ್ಲ ಎಂದು ಸಾಧಿಸಿ ತೋರಿಸಿದ್ದಾರೆ. ಪರ್ನಾಜೆ

ಪ್ರಶಸ್ತಿ, ಗಡಿನಾಡ ಧ್ವನಿ, ಸುಮಸೌರಭ ಪ್ರಶಸ್ತಿ ಕರಾವಳಿ ರತ್ನ ಸಹಿತ ಹಲವಾರು ಗೌರವಗಳನ್ನು ಪಡೆದಿದ್ದಾರೆ.ವಿದ್ವಾನ್ ಬಳ್ಳಪದವು ಯೋಗೀಶ್ ಶರ್ಮಾರ ಶಿಷ್ಯೆ , ನೂಜಯ ವೇ ಮೂ ಕೇಶವ ಭಟ್ ಮತ್ತು ದೇವಕಿ ದಂಪತಿಗಳ ಪುತ್ರಿ. ಪತಿ ವಿಟ್ಲ ಸುಪ್ರಜಿತ್, ಐ ಟಿ ಐ. ಕಾಲೇಜು ಮಾಜಿ ಪ್ರಾಂಶುಪಾಲರು ಕೋಡಂದೂರು ರಘುರಾಮ್ ಶಾಸ್ತ್ರಿ ,

ಸಂಗೀತದ ಸ್ಪರ್ಧೆಗಳಲ್ಲಿ ತೀರ್ಪುಗಾರರಾಗಿ ಕರ್ನಾಟಕ ಸಂಗೀತ ಪರೀಕ್ಷೆಯ ಪರೀಕ್ಷಕರಾಗಿ ಕಾರ್ಯಕ್ರಮ ನಿರ್ವಹಿಸಿದ್ದಾರೆ.

Leave a Comment