ಬೆಂಗಳೂರು :15ಕ್ಕೂ ಅಧಿಕ ಖಾಸಗಿ ಶಾಲೆಗಳಿಗೆ ದುಷ್ಕರ್ಮಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ. ಬೆದರಿಕೆ ಹಿನ್ನೆಲೆಯಲ್ಲಿ ಆತಂಕಗೊಂಡ ಪೋಷಕರು ಶಾಲೆಯ ದೌಡು.

Coastal Bulletin
ಬೆಂಗಳೂರು :15ಕ್ಕೂ ಅಧಿಕ ಖಾಸಗಿ ಶಾಲೆಗಳಿಗೆ ದುಷ್ಕರ್ಮಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ. ಬೆದರಿಕೆ ಹಿನ್ನೆಲೆಯಲ್ಲಿ ಆತಂಕಗೊಂಡ ಪೋಷಕರು ಶಾಲೆಯ ದೌಡು.

ಬೆಂಗಳೂರು: ನಗರದ 15ಕ್ಕೂ ಅಧಿಕ ಖಾಸಗಿ ಶಾಲೆಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆಯನ್ನು ಇ-ಮೇಲ್ ಮೂಲಕ ರವಾನಿಸಿದ್ದಾರೆ ಎನ್ನುವ ಸುದ್ದಿ ಆತಂಕ ಸೃಷ್ಟಿಸಿದೆ.

ಇ-ಮೇಲ್ ಮೂಲಕ ಬಸವೇಶ್ವರನಗರದ ನ್ಯಾಪಲ್, ವಿದ್ಯಾಶಿಲ್ಪ ಸೇರಿ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದಾರೆ. ಕಳೆದ ವರ್ಷ ಕೂಡ ಇದೇ ರೀತಿ ಒಂದೇ ದಿನ 30 ಶಾಲೆಗಳಿಗೆ ಇ- ಮೇಲ್ ಬೆದರಿಕೆ ಹಾಕಲಾಗಿತ್ತು. ಆದರೆ ಈವರೆಗೂ ಬಾಂಬ್ ಬೆದರಿಕೆ ಹಾಕಿರುವ ಆರೋಪಿಯ ಬಂಧನವಾಗಿಲ್ಲ.

ಬಾಂಬ್

ಬೆದರಿಕೆಯ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್‌ ಕಳುಹಿಸಿದ್ದಾರೆ. ಇತ್ತ ಬೆದರಿಕೆ ಹಿನ್ನೆಲೆಯಲ್ಲಿ ಆತಂಕಗೊಂಡ ಪೋಷಕರು ಶಾಲೆಯ ಬಳಿ ಓಡಿ ಬಂದಿದ್ದಾರೆ.

ಕಿಡಿಗೇಡಿಗಳು “ನಿಮ್ಮ ಶಾಲೆಗೆ ಬಾಂಬ್ ಇಡುತ್ತೇವೆ” ಎಂದು ಮೇಲ್ ಮಾಡಿದ್ದು, ಸದ್ಯ ಪೊಲೀಸರು ರಾಜಧಾನಿಯ ಎಲ್ಲೆಡೆ ಅಲರ್ಟ್ ಘೋಷಿಸಿದ್ದಾರೆ

Leave a Comment