Coastal Bulletin

ಸುಬ್ರಹ್ಮಣ್ಯ:ಕೊರೊನಾ ಪ್ರಕರಣಗಳ ತೀವ್ರತೆ ಇಳಿಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೋವಿಡ್‌ನಿಂದ ಹೇರಲಾಗಿದ್ದ ಸೇವೆಗಳ ನಿರ್ಬಂಧ ತೆರವು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಮತ್ತು ಸೇವೆಗಳಿಗೆ ಅನುಮತಿ ನೀಡಲಾಗಿದೆ.

ಹಿಂದಿನಂತೆ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ ಸೇರಿದಂತೆ, ಎಲ್ಲಾ ಸೇವೆಗಳನ್ನು ನೆರವೇರಿಸಲು ಭಕ್ತಾದಿಗಳಿಗೆ ಅವಕಾಶ ಕಲ್ಪಿಸಿ ಕೊಡಲಾಗಿದೆ ಎಂದು ಕುಕ್ಕೆ

ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದೆ.

ಸೇವಾಕರ್ತರು ಕೋವಿಡ್ ಲಸಿಕೆ ಪಡೆದಿರುವ ಬಗ್ಗೆ ವರದಿ ಹಾಜರಿ ಪಡಿಸುವುದು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.

Leave a Comment