ನೆತ್ತರಕೆರೆ : ಸೇವೆಯಿಂದ ನಿವೃತ್ತಿ ಹೊಂದಿದ ಅಂಗನವಾಡಿ ಶಿಕ್ಷಕಿ ಶಶಿಕಲಾ ಅವರಿಗೆ ಬೀಳ್ಕೊಡುಗೆ ಸಮಾರಂಭ.

Coastal Bulletin
ನೆತ್ತರಕೆರೆ : ಸೇವೆಯಿಂದ ನಿವೃತ್ತಿ ಹೊಂದಿದ ಅಂಗನವಾಡಿ ಶಿಕ್ಷಕಿ ಶಶಿಕಲಾ ಅವರಿಗೆ ಬೀಳ್ಕೊಡುಗೆ ಸಮಾರಂಭ.

ಬಂಟ್ವಾಳ :ತಾಲೂಕಿನ ಕಳ್ಳಿಗೆ ಗ್ರಾಮದ ನೆತ್ತರಕೆರೆ ಅಂಗನವಾಡಿಯಲ್ಲಿ ಶಿಕ್ಷಕಿಯಾಗಿದ್ದ ಶಶಿಕಲಾ ಅವರು ಸೇವೆಯಿಂದ ವಯೋ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ನೆತ್ತರಕೆರೆ ಹಾಗೂ ಸ್ತ್ರೀ ಶಕ್ತಿ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಸುಧೀರ್ಘ 33 ವರ್ಷಗಳ ನಿಸ್ವಾರ್ಥ ಸೇವೆಯನ್ನು ನೀಡಿದ ಶಿಕ್ಷಕಿ ಶಶಿಕಲಾ ಅವರನ್ನು ಶಾಲೆಯ ಹಾಗೂ ವಿವಿಧ ಸ್ತ್ರೀ ಶಕ್ತಿ ಸಂಘಟನೆಗಳ ಪರವಾಗಿ ಗೌರವಪೂರ್ವಕ ವಾಗಿ ಸನ್ಮಾನಿಸಲಾಯಿತು.

ಎಸ್ ಡಿ ಎಂ ಸಿ ಅಧ್ಯಕ್ಷ ದಾಮೋದರ ನೆತ್ತರಕೆರೆ ಅಧ್ಯಕ್ಷತೆಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಅತಿಥಿಗಳಾಗಿ ಮುಂಡಾಜೆಗುತ್ತು ಜ್ಯೋತಿಂದ್ರ ಶೆಟ್ಟಿ, ನಾರಾಯಣ ಹೊಳ್ಳ, ನಿವೃತ್ತ ಶಿಕ್ಷಕಿ ಜಯಲಕ್ಷ್ಮಿ, ಸಂತೋಷ್ ಕುಮಾರ್

ನೆತ್ತರಕೆರೆ, ಸುರೇಶ್ ಭಂಡಾರಿ ಅರ್ಬಿ, ಪದ್ಮನಾಭ ಶೆಟ್ಟಿ ಪುಂಚಮೆ, ಸುಬ್ರಹ್ಮಣ್ಯ ರಾವ್, ದೇವದಾಸ ಮಾಸ್ಟರ್ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಸಿಲ್ವಿಯಾ ಬ್ರೇಗ್ಸ್ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಸ್ವಾಗತಿಸಿ,ಜಸಿಂತಾ ರೊಡ್ರಿಗಸ್ ವಂದಿಸಿ, ವಿದ್ಯಾ ಸನ್ಮಾನ ಪತ್ರ ವಾಚಿಸಿ, ಮೋಹಿನಿ ನಿರೂಪಿಸಿದರು.ಶಾಲಾ ಎಸ್ ಡಿ ಎಂ ಸಿ ಸದಸ್ಯರು, ಸ್ತ್ರೀಶಕ್ತಿ ಸಂಘಟನೆಯ ಸದಸ್ಯರು ಹಾಗೂ ಸಹ ಶಿಕ್ಷಕಿಯರು ಸಹಕರಿಸಿದರು.

Leave a Comment