Coastal Bulletin

ಬಂಟ್ವಾಳ :ಬಿ.ಸಿ. ರೋಡ್ ನ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನದಲ್ಲಿ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಾ.02ರಂದು ಆದಿತ್ಯವಾರ ಮಾತೃಶಕ್ತಿ ಸಮಾವೇಶ ನಡೆಯಿತು.

ಬಿಜೆಪಿ ಸಾಕಷ್ಟು ಸುಳ್ಳು ಭರವಸೆಗಳು ನೀಡಿ, ಊಹಾಪೋಹಗಳನ್ನು ಹರಡಿ, ಅಪಪ್ರಚಾರಗಳನ್ನು ಮಾಡಿ ಅಧಿಕಾರಕ್ಕೆ ಬಂದಿದೆ. ತಾನು ನೀಡಿದ ಯಾವುದೇ ಭರವಸೆಗಳನ್ನು ಅದು ಈಡೇರಿಸಿಲ್ಲ. ಆದರೆ ಕಾಂಗ್ರೆಸ್ ನುಡಿದಂತೆ ನಡೆದ ಪಕ್ಷ. ಈಗಲೂ ಗ್ಯಾರಂಟಿ ಕಾರ್ಡ್‍ಗಳ ಮೂಲಕ ಹಲವು ಕಾರ್ಯಕ್ರಮಗಳನ್ನು ಕಾಂಗ್ರೆಸ್ ಘೋಷಿಸಿದೆ. ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪ ಅಮರನಾಥ್ ಆಶಯ ವ್ಯಕ್ತಪಡಿಸಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 

ಗೃಹಲಕ್ಷ್ಮಿ ಯೋಜನೆಯಡಿ ಪ್ರತಿಯೊಂದು ಮನೆ ಯಜಮಾನಿಗೆ ಮಾಸಿಕ 2,000 ರೂ., ಗೃಹಜ್ಯೋತಿ ಕಾರ್ಯಕ್ರಮದಡಿ 200 ಯೂನಿಟ್ ವಿದ್ಯುತ್ ಉಚಿತ ಮತ್ತು ವಿದ್ಯಾವಂತ ಪದವೀಧ ನಿರುದ್ಯೋಗಿಗಳಿಗೆ 3,000 ಹಾಗೂ ಡಿಪ್ಲೊಮಾ ಪದವೀಧರರಿಗೆ 1,500 ರೂ. ನೀಡುವ ಬಗ್ಗೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಪ್ರತಿಯೊಬ್ಬ ಸದಸ್ಯನಿಗೆ 10 ಕೆ.ಜಿ. ಅಕ್ಕಿ ವಿತರಿಸುವ ಬಗ್ಗೆಯೂ ಭರವಸೆ ನೀಡಿದೆ. ನೀಡಿದ ಭರವಸೆಗಳನ್ನು ಈಡೇರಿಸುವ ಮೂಲಕ ಮತ್ತೊಮ್ಮೆ ನುಡಿದಂತೆ ನಡೆದ ಸರಕಾರ ಎಂಬ ಹೆಗ್ಗಳಿಕೆಗೆ ಕಾಂಗ್ರೆಸ್ ಪಾತ್ರವಾಗಲಿದೆ ಎಂದು ಅವರು ಹೇಳಿದರು.

 ದಿಕ್ಸೂಚಿ ಭಾಷಣ ಮಾಡಿದ ರಾಜ್ಯ ಕಾಂಗ್ರೆಸ್ ವಕ್ತಾರೆ ಭವ್ಯಾ ನರಸಿಂಹಮೂರ್ತಿ ಹೇಳಿದರು. ಬಿಜೆಪಿ ಆಡಳಿತದಲ್ಲಿ ಆಗಿರುವ ಬೆಲೆ ಏರಿಕೆಗಳಿಂದ ಜನರ ಉಳಿತಾಯಕ್ಕೆ ಆಗಿರುವ ನಷ್ಟ ಮತ್ತು ಕಾಂಗ್ರೆಸ್ ಮುಂದೆ ಅಧಿಕಾರಕ್ಕೆ ಬಂದರೆ ನೀಡಲಿರುವ ಗ್ಯಾರಂಟಿ ಯೋಜನೆಗಳಿಂದಾಗುವ ಉಳಿತಾಯಗಳ ಬಗ್ಗೆ ಕಾರ್ಯಕರ್ತರು ಜನತೆಗೆ ಮನವರಿಕೆ ಮಾಡಿಕೊಡಬೇಕು ಎಂದು ಅವರು ಸೂಚಿಸಿದರು.

ಮಾಜಿ ಪ್ರಧಾನಿ ರಾಜೀವ ಗಾಂಧಿಯವರು ಪಂಚಾಯತ್ ರಾಜ್ ಕಾನೂನಿನಡಿ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ವರೆಗಿನ ವಿವಿಧ ಹಂತಗಳಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮಹಿಳಾ ಮೀಸಲಾತಿ ತಂದರು. ಹೀಗಾಗಿ ಇಂದು ಸಾಕಷ್ಟು ಮಹಿಳೆಯರು ಆಡಳಿತದ ವಿವಿಧ ಹಂತಗಳಲ್ಲಿ ಅಧಿಕಾರದಲ್ಲಿದ್ದಾರೆ.  ಎಂದು ಅಧ್ಯಕ್ಷತೆ ವಹಿಸಿದ್ದ ರಮಾನಾಥ ರೈ ಅವರು ತಿಳಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ. ದ.ಕ. ಜಿಲ್ಲಾ ಮಹಿಳಾ

ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಸಭೆಯನ್ನುದ್ದೇಶಿಸಿ ಮಾತನಾಡಿದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಅಪ್ಪಿ, ಬಂಟ್ವಾಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲವೀನಾ ಮೊರಾಸ್ ವೇದಿಕೆಯಲ್ಲಿದ್ದರು. ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ. ಪೂಜಾರಿ ಸ್ವಾಗತಿಸಿದರು. 

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಲ್ಲಿಕಾ ಪಕ್ಕಳ, ರಾಜ್ಯ ಮಹಿಳಾ ಕಾಂಗ್ರೆಸ್ ಸದಸ್ಯೆ ಐಡಾ ಸುರೇಶ್, ಕೆ.ಪಿ.ಸಿ.ಸಿ. ಸದಸ್ಯ ಪಿಯೂಸ್ ಎಲ್. ರಾಡ್ರಿಗಸ್, ಕೆ.ಪಿ.ಸಿ.ಸಿ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಕೆ.ಪಿ.ಸಿ.ಸಿ. ಸದಸ್ಯ ಎಂ.ಎಸ್. ಮುಹಮ್ಮದ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಗಾಣಿಗ, ಜಿ.ಪಂ. ಮಾಜಿ ಸದಸ್ಯ ಪದ್ಮಶೇಖರ ಜೈನ್, ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ವಾಸು ಪೂಜಾರಿ, ಶಬ್ಬೀರ್ ಸಿದ್ಧಕಟ್ಟೆ, ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆಯರಾದ ಮಲ್ಲಿಕಾ ವಿ. ಶೆಟ್ಟಿ, ಧನಲಕ್ಷ್ಮಿ ಬಂಗೇರ, ತಾ.ಪಂ. ಮಾಜಿ ಸದಸ್ಯೆಯರಾದ ನಝೀಮಾ ಬೇಗಂ, ಶೋಭಾ ರೈ, ಪುರಸಭೆ ಉಪಾಧ್ಯಕ್ಷೆ ಜೆಸಿಂತಾ, ಪುರಸಭೆ ಸದಸ್ಯರಾದ ಜನಾರ್ಧನ್ ಚೆಂಡ್ತಿಮಾರ್, ಲೋಲಾಕ್ಷಿ ಶೆಟ್ಟಿ, ಅಲ್ಪಸಂಖ್ಯಾತ ಘಟಕದ ಬ್ಲಾಕ್ ಅಧ್ಯಕ್ಷ ಹರ್ಷದ್ ಸೆರಾವು, ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ಅಬ್ಬಾಸ್ ಅಲಿ, ಪಾಣೆಮಂಗಳೂರು ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಇಬ್ರಾಹೀಂ ನವಾಝ್, ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಜೋರಾ, ಹಿಂದುಳಿದ ವರ್ಗಗಳ ಬ್ಲಾಕ್ ಅಧ್ಯಕ್ಷ ರಮೇಶ್ ಪಣೋಲಿಬೈಲು, ಪ್ರಚಾರ ಸಮಿತಿ ಸಂಯೋಜಕ ಉಮೇಶ್ ಸಪಲ್ಯ, ಪ್ರಮುಖರಾದ ಕಾಂಚಲಾಕ್ಷಿ, ಫ್ಲೋಸಿ ಡಿಸೋಜಾ, ಜೊಸ್ಪಿನ್ ಡಿಸೋಜ, ರೇಶ್ಮಾ, ಫೌಝಿಯಾ ಮುಂತಾದವರು ಉಪಸ್ಥಿತರಿದ್ದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ನೀಡಿದರು.

Leave a Comment