ಬಂಟ್ವಾಳ: ಇಲ್ಲಿನ ಜಕ್ರಿಬೆಟ್ಟು ಎಂಬಲ್ಲಿ ಮನೆ ಮೇಲಿನ ಮಹಡಿಯಿಂದ ಕೆಳಕ್ಕೆ ಬಿದ್ದು 10ನೇ ತರಗತಿ ಬಾಲಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ನಿವಾಸಿ ದಿನೇಶ್ ಪೂಜಾರಿ ಇವರ ಪುತ್ರ ಆದಿಶ್(15) ಮೃತ ದುರ್ದೈವಿ.
ಇವರು ಮನೆಯವರಿಗೆ ಗೊತ್ತಿಲ್ಲದಂತೆ ಮೊಬೈಲ್ ಹಿಡಿದುಕೊಂಡು ಮನೆ ಮಹಡಿಗೆ ಹೋಗಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಇದರಿಂದಾಗಿ ಬಾಲಕನ ತಲೆಗೆ ಗಂಭೀರ ಗಾಯವಾಗಿದ್ದು, ವಿಪರೀತ ರಕ್ತಸ್ರಾವದಿಂದ
ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈತನು ರಾತ್ರಿ ವೇಳೆಯೂ ಮೊಬೈಲ್ ಬಳಕೆ ಮತ್ತು ಟಿವಿ ನೋಡುವ ಚಟ ಹೊಂದಿದ್ದನು ಎನ್ನಲಾಗಿದೆ. ಬಂಟ್ವಾಳ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.









