Coastal Bulletin

ಬಂಟ್ವಾಳ : ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಇದರ ವತಿಯಿಂದ ಮಕ್ಕಳ ಪ್ರತಿಭಾ ಅನಾವರಣಕ್ಕಾಗಿ ಪುಟ್ಟ ಪ್ರತಿಭೆ ಕಾರ್ಯಕ್ರಮವನ್ನು ಸಂಚಯಗಿರಿಯ ನರಸಿಂಹ ರಾಜ್ ಹೊಳ್ಳ ಅವರ ಮನೆಯ ಆವರಣದಲ್ಲಿ ಆಯೋಜಿಸಲಾತು.

ಕಾರ್ಯಕ್ರಮವನ್ನು ಹಿರಿಯ ನಾಗರಿಕರಾದ ದಾಮೋದರ್ ಸಂಚಯಗಿರಿ ಅವರು ಉದ್ಘಾಟಿಸಿದರು. ಅವರು ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಇಂತಹ ಕಾರ್ಯಕ್ರಮಗಳು ಪೂರಕ ಎಂದು ತಿಳಿಸಿದರು.

ನಾಗರಿಕ ಕ್ರಿಯಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ನಾಗರಿಕ ಕ್ರಿಯಾ ಸಮಿತಿಯ ಎಲ್ಲಾ ಸದಸ್ಯರ ಸಹಕಾರದಿದೊಂದಿಗೆ ಇಂತಹ ಕಾರ್ಯಕ್ರಮಗಳು ನಡೆಯುತ್ತಿರುವುದಾಗಿ ತಿಳಿಸಿದರು.

ವೇದಿಕೆಯಲ್ಲಿ ನಯನ ಹೊಳ್ಳ, ಕ್ರಿಯಾಸಮಿತಿಯ ಉಪಾಧ್ಯಕ್ಷೆ ಪ್ರಿಯಾಲತಾ, ಕಾರ್ಯದರ್ಶಿ

ಶಿವನಾಯಕ್, ಕ್ರೀಡಾ ಕಾರ್ಯದರ್ಶಿ ಪುರಂದರ ಶೆಟ್ಟಿ, ಪ್ರಮುಖರಾದ ಸುಧಾಕರ ಸಾಲ್ಯಾನ್, ರಮೇಶ್ ಸಾಲ್ಯಾನ್, ಸಂಕಪ್ಪ ಶೆಟ್ಟಿ, ರಾಘವೇಂದ್ರ ಬನ್ನಿಂತ್ತಾಯ ಮತ್ತಿತರರು ಉಪಸ್ಥಿತರಿದ್ದರು.

ಸತೀಶ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಿಬಿರಾರ್ಥಿ ಮಕ್ಕಳು ಚಿತ್ರಕಲೆ, ಕಸದಿಂದ ರಸ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಪ್ರತಿಭಾ ಪ್ರದರ್ಶನ ಮಾಡಿದರು. ಶಿಲ್ಪ, ನಿವೇದಿತಾ, ಧನ್ಯ ತೀರ್ಪುಗಾರರಾಗಿ ಸಹಕರಿಸಿದರು. ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ನೀಡಲಾಯಿತು

Leave a Comment