ನರಿಕೊಂಬು: ಮೇ 4ರಂದು ಕುಲಾಲ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮ. ಅದ್ದೂರಿ ಮೆರವಣಿಗೆ, ಕುಣಿತ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮ.

Coastal Bulletin
ನರಿಕೊಂಬು: ಮೇ 4ರಂದು ಕುಲಾಲ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮ. ಅದ್ದೂರಿ ಮೆರವಣಿಗೆ, ಕುಣಿತ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮ.

ಬಂಟ್ವಾಳ :ನರಿಕೊಂಬು ಕುಂಬಾರರ ಯಾನೆ ಕುಲಾಲರ ಸಂಘ (ರಿ.) ಮತ್ತು ಮಹಿಳಾ ಘಟಕ ಇದರ ಅಶ್ರಯದಲ್ಲಿ ಕುಲಾಲ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮವು ಮೇ 4ನೇ ಆದಿತ್ಯವಾರ ಬೆಳಿಗ್ಗೆ ನರಿಕೊಂಬುವಿನಲ್ಲಿ ನಡೆಯಲಿದೆ.

ಮಾಣಿಲದ ಪರಮಪೂಜ್ಯ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ  ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಿದ್ದು,  ಕುಂಬಾರರ ಯಾನೆ ಕುಲಾಲರ ಜಿಲ್ಲಾ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಸ್ಪೀಕರ್ ಯು ಟಿ ಖಾದರ್, ಶಾಸಕ ರಾಜೇಶ್

ನಾಯ್ಕ್  ಸಹಿತ ಅನೇಕ ಗಣ್ಯರು ಉಪಸ್ಥಿತರಿರುವರು, ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ.

ಈ ಸಂದರ್ಭದಲ್ಲಿ ಅದ್ದೂರಿ ಮೆರವಣಿಗೆ ನಡೆಯಲಿದ್ದು, ಕುಣಿತ ಭಜನೆ, ಭರತನಾಟ್ಯ, ಗೀತಾ ಸಾಹಿತ್ಯ ಸಂಭ್ರಮ, ನೃತ್ಯ ಕಾರ್ಯಕ್ರಮ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಕಟ್ಟಡ ಸಮಿತಿಯ ಅಧ್ಯಕ್ಷ ನಾಗೇಶ್ ಕುಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment