Coastal Bulletin

ಬಂಟ್ವಾಳ:ಲಯನ್ಸ್ ಕ್ಲಬ್ ಮತ್ತಿತರ ಸಂಘ ಸಂಸ್ಥೆಗಳು ಅರಣ್ಯ ಇಲಾಖೆಯೊಂದಿಗೆ ಕೈ ಜೋಡಿಸಿದಾಗ ಪರಿಸರ ಸಂರಕ್ಷಣೆ ಜೊತೆಗೆ ಸಾಮಾಜಿಕ ಪ್ರಗತಿ ಸಾಧ್ಯವಾಗುತ್ತದೆ ಎಂದು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಹೇಳಿದ್ದಾರೆ.

ಇಲ್ಲಿನ ವಗ್ಗ ಸಮೀಪದ ಕಾರಿಂಜ ಕ್ರಾಸ್ ರಾಷ್ಟ್ರೀಯ ಹೆದ್ದಾರಿ ಬದಿ ಲಯನ್ಸ್ ಕ್ಲಬ್ ವತಿಯಿಂದ ಗಿಡ ನೆಡುವ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.

ಲಯನ್ಸ್ ಜಿಲ್ಲಾ ಗವರ್ನರ್ ಎಸ್. ಸಂಜಿತ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲಯನ್ಸ್ ಮಲ್ಟಿಪಲ್ ಜಿಲ್ಲಾಧ್ಯಕ್ಷ ವಸಂತ ಕುಮಾರ್ ಶೆಟ್ಟಿ, ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ಶುಭ ಹಾರೈಸಿದರು.

ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಕೀರ್ತಿ ಕುಮಾರ್, ಲಯನ್ಸ್

ಜಿಲ್ಲಾ ಪ್ರಥಮ ಮಹಿಳೆ ಪ್ರಗತಿ ಶೆಟ್ಟಿ, ಎರಡನೇ ಉಪ ರಾಜ್ಯಪಾಲೆ ಭಾರತಿ ಬಿ.ಎಂ., ಕಾವಳಪಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಜನಿ, ಪ್ರಮುಖರಾದ ಅನಿಲ್ ಕುಮಾರ್ ಪಿ.ವಿ., ರಾಮ್ ಮೋಹನ್ ಆಳ್ವ, ಸಂತೋಷ್ ಕುಮಾರ್ ಶೆಟ್ಟಿ, ಮಾಧವ ಉಳ್ಳಾಲ್, ಕೆ.ಸಿ.ಪ್ರಭು, ಲಕ್ಷ್ಮಣ್ ಕುಲಾಲ್ ಅಗ್ರಬೈಲು, ಶ್ರೀನಿವಾಸ ಪೂಜಾರಿ, ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಆಚಾರ್, ತಪೋದನ್ ಶೆಟ್ಟಿ, ಪ್ರಶಾಂತ್ ಪೈ, ಮನೋರಂಜನ್ ಕೆ. ಆರ್., ಪೂಜಾ ಪಿ. ಪೈ ಇದ್ದರು.

Leave a Comment