Coastal Bulletin

ಬಂಟ್ವಾಳ: ವಕೀಲರ ಸಂಘ (ರಿ ) ಇದರ 2023-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜೂ.1ರಂದು ಗುರುವಾರ ಸ್ಪರ್ಶ ಕಲಾ ಮಂದಿರ ಬಿ.ಸಿ. ರೋಡ್ ನಲ್ಲಿ ನಡೆಯಿತು.

2023-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ರಿಚರ್ಡ್ ಕೊಸ್ತಾ ಎಂ, ಉಪಾಧ್ಯಕ್ಷರಾಗಿ ರಾಜೇಶ್ ಬೊಳ್ಳುಕಲ್ಲು, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಡಿ ಬೈರಿಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಸುನಿತಾ ಕೆ ಕೆ, ಕೋಶಾಧಿಕಾರಿಯಾಗಿ ನಿರ್ಮಲ ಶೆಟ್ಟಿಯವರು ಪ್ರಮಾಣವಚನ ಸ್ವೀಕರಿಸಿದರು.

ಪದಗ್ರಹಣ ಕಾರ್ಯಕ್ರಮವನ್ನು ದೀಪಬೆಳಗಿಸುವುದರ ಮುಖಾoತರ ಅಂಕೋಲದ ಹಿರಿಯ ಸಿವಿಲ್ ನ್ಯಾಯಾಧಿಶರಾದ ಗೌರವಾನ್ವಿತ ಮನೋಹರ ಎಂ ಅವರು ಚಾಲನೆ ನೀಡಿ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ನೀಡಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಂಟ್ವಾಳದ ಹಿರಿಯ ಸಿವಿಲ್ ನ್ಯಾಯಾಧಿಶರಾದ ಭಾಗ್ಯಮ್ಮ, ಪ್ರಧಾನ ಸಿವಿಲ್ ನ್ಯಾಯಾಧಿಶರಾದ ಚಂದ್ರಶೇಖರ ಎಲ್ಲಪ್ಪ ತಳವಾರ ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಧಿಶರಾದ ಕೃಷ್ಣಮೂರ್ತಿ ಯನ್ ಅವರು ಭಾಗವಹಿಸಿದ್ದರು.

ವಕೀಲರ ಸಂಘ (ರಿ) ಬಂಟ್ವಾಳದ ನಿರ್ಗಮಿತ ಅಧ್ಯಕ್ಷರಾದ ಗಣೇಶಾನಂದ ಸೋಮಯಾಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ವಕೀಲರ ಸಂಘ (ರಿ ) ಬಂಟ್ವಾಳದ ಎಲ್ಲಾ ಮಾಜಿ ಅಧ್ಯಕ್ಷರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಪ್ರಸಾದ್ ಕುಮಾರ್ ರೈ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಡಿ ಬೈರಿಕಟ್ಟೆ ಧನ್ಯವಾದ ಸಲ್ಲಿಸಿದರು. ನರೇಂದ್ರನಾಥ ಭಂಡಾರಿಯವರು ಕಾರ್ಯಕ್ರಮ ನಿರ್ವಹಿಸಿದರು.

ಪದಗ್ರಹಣ ಕಾರ್ಯಕ್ರಮದ ನಂತರ ವಿಠ್ಠಲ ನಾಯಕ್ ಕಲ್ಲಡ್ಕ ಅವರ ತಂಡದಿಂದ ವಿನೂತನ ಶೈಲಿಯ ಗೀತಾ ಸಾಹಿತ್ಯ ಸಂಭ್ರಮ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

Leave a Comment