ಬಂಟ್ವಾಳ :ಆಶೀರ್ವಾದ್ ಸೇವಾ ಸಂಘ ಮತ್ತು ಆಶೀರ್ವಾದ್ ಮಹಿಳಾ ಸೇವಾ ಸಂಘ ತುಂಬೆ ಇದರ ಆಶ್ರಯದಲ್ಲಿ ಅ.06ರಂದು ಆದಿತ್ಯವಾರ ತುಂಬೆ ಮುದಲ್ಮೆಯಲ್ಲಿ ಆಟಿಡೊಂಜಿ ಗಮ್ಮತ್ತು ಕಾರ್ಯಕ್ರಮ ನಡೆಯಲಿದೆ.
ಬೆಳಿಗ್ಗೆ 9.00 ಗಂಟೆಗೆ ಭಾರತ ಮಾತ ಪೂಜಾನ ಕಾರ್ಯಕ್ರಮವಿದ್ದು ನಂತರ ಅತೀ ಹೆಚ್ಚು ಅಂಕ ಪಡೆದ ಪರಿಸರದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ, ಬೆಳಿಗ್ಗೆಯಿಂದ ಸಂಜೆಯ ವರೆಗೆ ಬಂಜಾರ
ವನಸ್-ತೆನಸ್ ಸೇರಿದಂತೆ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಬಗೆಯ ಕ್ರೀಡೆಗಳು ನಡೆಯಲಿದೆ. ಕಾರ್ಯಕ್ರಮದಲ್ಲಿ ತುಳು ಚಿತ್ರರಂಗದ ಖ್ಯಾತ ನಟ ನಟಿಯರ ಸಹಿತ ಅನೇಕ ಗಣ್ಯರು ಆಗಮಿಸಲಿದ್ದು ,ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.















