ಬಂಟ್ವಾಳ :ತುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಗ್ರಾ ಪಂ ಉಪಾಧ್ಯಕ್ಷರಾದ ಗಣೇಶ ಸಾಲಿಯಾನ್ ತುಂಬೆ ಅವರು ಮನೆ ಮನೆ ಭೇಟಿ ನೀಡಿ ಸಾಂಕ್ರಾಮಿಕ ರೋಗದ ಬಗ್ಗೆ ಮುಂಜಾಗ್ರತೆ ವಹಿಸುವಂತೆ ಮನವರಿಕೆ ಮಾಡಿ, ಸ್ವಚ್ಛತೆ ಕಾಪಾಡಿ ಎಚ್ಚರ ವಹಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವಾಲಾಲ್ ಚೌಹಾಣ್ ಹಾಗೂ ಆಶಾ ಕಾರ್ಯಕರ್ತೆಯರು ಜತೆಗಿದ್ದರು.















