Coastal Bulletin

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಘಾತಕಾರಿ ಅಂಶವೊಂದು ಹೊರಬಿದ್ದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ನೆರಿಯ ನಿವಾಸಿ ಚಿದಾನಂದ್ ಎಂಬವರು ತನ್ನ ಪತ್ನಿಗೆ ಭಯೋತ್ಪಾದಕರ ಜತೆ ಸಂಪರ್ಕ ಇದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಮುಸ್ಲಿಂ ವ್ಯಕ್ತಿಯೊಬ್ಬ ಚಿದಾನಂದ್ ಅವರಿಗೆ ಕರೆ ಮಾಡಿ ಬೆದರಿಕೆ ಒಡ್ಡಿದ್ದಾನೆ ಎನ್ನಲಾಗಿದ್ದು,ಈ ವಿಷಯವನ್ನು ಕೂಡ ಚಿದಾನಂದ್ ಪೊಲೀಸರಿಗೆ

ತಿಳಿಸಿದ್ದಾರೆ.

ಚಿದಾನಂದ್ ಅವರು ತನ್ನ ಪತ್ನಿ ಆರ್. ರಾಜಿ ಎಂಬಾಕೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಸೋನಾವಣೆಗೆ ದೂರು ನೀಡಿದ್ದು, ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

Leave a Comment