ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನಾ ಪುರಸ್ಕಾರ.

Coastal Bulletin
ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನಾ ಪುರಸ್ಕಾರ.

ಬಂಟ್ವಾಳ :2024-2025 ನೇ ಸಾಲಿನಲ್ಲಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ತನ್ನ ಆರ್ಥಿಕ ವ್ಯವಹಾರದಲ್ಲಿ ಗಣನೀಯ ಸಾಧನೆ ಮಾಡಿರುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಹಾಗೂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಯವರನ್ನು ದ. ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರಕುಮಾರ್ ಸಾಧನಾ ಪುರಸ್ಕಾರ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಎಸ್. ಸಿ. ಡಿ. ಸಿ. ಸಿ. ಬ್ಯಾಂಕ್ ನಿರ್ದೇಶಕರಾದ ಟಿ. ಜಿ. ರಾಜಾರಾಮ್

ಭಟ್, ದೇವಿಪ್ರಸಾದ್ ಶೆಟ್ಟಿ ಸೇರಿದಂತೆ ಎಲ್ಲಾ ನಿರ್ದೇಶಕರು,ಸಹಕಾರ ಸಂಘಗಳ ಉಪ ನಿಭಂದಕರಾದ ಎಚ್. ಎನ್.ರಮೇಶ್,ನಬಾರ್ಡ್ ಅಧಿಕಾರಿಗಳು ಉಪಸ್ಥಿತರಿದ್ದರು

Leave a Comment