Coastal Bulletin

ಬಂಟ್ವಾಳ: ಜಿಲ್ಲಾಡಳಿತ ಸಹಿತ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಪರಿಶಿಷ್ಟ ಕಲ್ಯಾಣ ಇಲಾಖೆ ವತಿಯಿಂದ ಬ್ರಹ್ಮರಕೂಟ್ಲು ಬಂಟರ ಭವನದಲ್ಲಿ ಶನಿವಾರ ನಡೆದ "ಅಂತ್ಯೋದಯ" ವಿವಿಧ ಯೋಜನೆಗಳ ರಾಜ್ಯಮಟ್ಟದ ಮಾಹಿತಿ ಕಾರ್ಯಾಗಾರಕ್ಕೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸ್ಥಳೀಯಾಡಳಿತ ಸದಸ್ಯರಿಗೆ ಅಂತ್ಯೋದಯ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಲು ಚಿಂತಿಸಲಾಗಿದೆ. ಇದೇ ತಿಂಗಳು ಶಿವಮೊಗ್ಗ , ಮಡಿಕೇರಿ, ಚಿಕ್ಕಮಗಳೂರು ಸಹಿತ 10 ಜಿಲ್ಲೆಗಳಲ್ಲಿ‌ 2500 ಮಂದಿಗೆ ಕಾರ್ಯಾಗಾರ ನಡೆಸಲು ಉದ್ದೇಶಿಸಲಾಗಿದೆ ಎಂದು ಸಚಿವ

ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

ಬೂಡ ಅಧ್ಯಕ್ಷ ಬಿ. ದೇವದಾಸ ಶೆಟ್ಟಿ , ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಸದಸ್ಯ ರವೀಂದ್ರ ಕಂಬಳಿ, ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ನೋಡಲ್ ಅಧಿಕಾರಿ ಚಂದ್ರ ನಾಯ್ಕ್ , ಹಿಂದುಳಿದ ವರ್ಗಗಳ ಜಿಲ್ಲಾಧಿಕಾರಿ ಸಚಿನ್ ಕುಮಾರ್, ಪ್ರಮುಖರಾದ ಸೋಮಪ್ಪ ಕೋಟ್ಯಾನ್ , ಗಣೇಶ್ ಸುವರ್ಣ, ದಿನೇಶ್ ಅಮ್ಟೂರು, ಡೊಂಬಯ‌ ಅರಳ, ರವೀಶ್ ಶೆಟ್ಟಿ ಕರ್ಕಳ, ಪ್ರದೀಪ್ ಅಜ್ಜಿಬೆಟ್ಟು, ಸೀತಾರಾಮ ಪೂಜಾರಿ, ಪವನ್ ಶೆಟ್ಟಿ ಉಪಸ್ಥಿತರಿದ್ದರು.

Leave a Comment