ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ಬಂಟ್ವಾಳ ವಲಯದ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಬಿ.ಮೂಡ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.
ಈ ಸಂದರ್ಭದಲ್ಲಿ ವಲಯದ ಅಧ್ಯಕ್ಷ ರಾಜೇಂದ್ರ ಕೆ., ಗೌರವಾಧ್ಯಕ್ಷ ಕಿಶೋರ್, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಹರೀಶ್ ಕುಂದರ್, ಮಾಜಿ ಅಧ್ಯಕ್ಷರಾದ ಹರೀಶ್ ರಾವ್, ದಯಾನಂದ್ ಬಂಟ್ವಾಳ್, ಸುಕುಮಾರ್, ಕಾರ್ಯದರ್ಶಿ ರವಿ ಕಲ್ಪನೆ, ಕೋಶಾಧಿಕಾರಿ
ಕೃಷ್ಣರಾಜ್ ರಾವ್ ಹಾಗೂ ಸದಸ್ಯರಾದ ವಿಕೇಶ್, ಪ್ರಶಾಂತ್, ಬಾಲಕೃಷ್ಣ, ದಿನೇಶ್ ಶೆಟ್ಟಿ, ವಿಕ್ರಮ್, ಪ್ರಭಾಕರ್ ಮತ್ತು ಪ್ರವೀಣ್ ಉಪಸ್ಥಿತರಿದ್ದರು.
ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ ಬಾಲಕೃಷ್ಣ ಹಾಗೂ ಸಿಬ್ಬಂದಿ ಮತ್ತು ಸೇವಾ ಪ್ರತಿನಿಧಿಗಳು ಸಹಕರಿಸಿದರು.












