ಸಿಂದಗಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ, 31,088 ಮತಗಳ ಅಂತರದಿಂದ ಭರ್ಜರಿ ಗೆಲವು ಸಾಧಿಸಿದ್ದಾರೆ. ಬಿಜೆಪಿಯ ರಮೇಶ ಭೂಸನೂರ 93,380, ಕಾಂಗ್ರೆಸ್ ನ ಅಶೋಕ ಮನಗೂಳಿ 63,292, ಜೆಡಿಎಸ್ ನ ನಾಜಿಯಾ ಅಂಗಡಿ 4321 ಮತಗಳನ್ನು ಪಡೆದುಕೊಂಡಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ ಸಿಂದಗಿ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 31,088 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ.
ಹಾನಗಲ್‌ನಲ್ಲಿ ಕಾಂಗ್ರೆಸ್ ವಿಜಯ ಪತಾಕೆ ಹಾರಿಸಿದ್ದು, ಹೇಗಾದರೂ ಗೆಲ್ಲಬೇಕೆನ್ನುವ ಬಿಜೆಪಿ ನಿರೀಕ್ಷೆಯನ್ನು ಹುಸಿ ಮಾಡಿದೆ. ಫಲಿತಾಂಶ ಹೊರಬೀಳುತ್ತಿದ್ದಂತೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಾನಗಲ್ ಕ್ಷೇತ್ರದ ಮತದಾರರಿಗೆ ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.
ಗೆಲುವಿನ ನಂತರ ಮಾತನಾಡಿದ ಸಿದ್ದರಾಮಯ್ಯ ಅವರು, ಸಿಂದಗಿ ಕ್ಷೇತ್ರದಲ್ಲಿ
ನಮ್ಮ ನಿರೀಕ್ಷೆ ಹುಸಿಯಾಗಿದೆ. ದೊಡ್ಡ ಅಂತರದಲ್ಲಿ ಸೋತಿದ್ದೇವೆ. ಕಾಂಗ್ರೆಸ್ ಪಕ್ಷ ಕಳೆದ ಬಾರಿ ಮೂರನೇ ಸ್ಥಾನದಲ್ಲಿತ್ತು. ಈಗ ಎರಡನೇ ಸ್ಥಾನಕ್ಕೆ ಬಂದಿದ್ದೇ ಅದೇ ಸಮಾಧಾನ, ಆದ್ರೆ ಸೋಲು ಸೋಲೇ ಎಂದಿದ್ದಾರೆ.
ಹಾನಗಲ್ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವ ನಡೆದಿದೆ.















