ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ಕೈಕುಂಜೆ ಕನ್ನಡ ಭವನದಲ್ಲಿ ನೀರ್ಪಾಜೆ ಭೀಮ ಭಟ್ಟ ಪ್ರಶಸ್ತಿ ಪ್ರದಾನ ಮತ್ತು ಸಂಸ್ಮರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆ ಗುರುವಾರ ನಡೆಯಿತು.
ಕನ್ನಡದ ಕಲ್ಹಣ ನೀರ್ಪಾಜೆ ಭೀಮ ಭಟ್ಟ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಇದೇ 12 ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡಿನ ಕೈಕುಂಜೆ ಕನ್ನಡ ಭವನದಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಸುದರ್ಶನ್ ಜೈನ್ ಹೇಳಿದ್ದಾರೆ. ಇಲ್ಲಿನ ಬಿ.ಸಿ.ರೋಡು ಕೈಕುಂಜೆ ಕನ್ನಡ ಭವನದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಈ ಪ್ರಶಸ್ತಿಗೆ ಹಿರಿಯ ವಿದ್ವಾಂಸ ಪರಂಪರೆ ಕೊಂಡಿಯಾಗಿ ಗುರುತಿಸಿಕೊಂಡ ಪಾದೆಕಲ್ಲು ವಿಷ್ಣು ಭಟ್ಟರು ಆಯ್ಕೆಯಾಗಿದ್ದಾರೆ. ಇದೇ ವೇಳೆ ಭೀಮ ಭಟ್ಟರ ಸಂಸ್ಮರಣೆ
ಕಾರ್ಯಕ್ರಮ ನಡೆಯಲಿದ್ದು, ಕಸಾಪ ಜಿಲ್ಲಾಧ್ಯಕ್ಷ ಎಂ. .ಪಿ. ಶ್ರೀನಾಥ್ ಅಧ್ಯಕ್ಷತೆ ವಹಿಸುವರು. ಕ.ಸಾ.ಪ. ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ಮಾಜಿ ಸಚಿವ ಬಿ.ರಮಾನಾಥ ರೈ, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಆಲಿ ಮತ್ತಿತರ ಗಣ್ಯರು ಭಾಗವಹಿಸುವರು ಎಂದರು.
ಸಮಿತಿ ಕೋಶಾಧಿಕಾರಿ ಕೊಳಕೆ ಗಂಗಾಧರ ಭಟ್ , ಕ.ಸಾ.ಪ. ಅಧ್ಯಕ್ಷ ಕೆ.ಮೋಹನ್ ರಾವ್, ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ , ಶಿವಶಂಕರ್, ಸೀತಾರಾಮ ಶೆಟ್ಟಿ , ಅಬ್ದುಲ್ ರಹಿಮಾನ್ ಡಿ.ಬಿ. ಮತ್ತಿತರರು ಇದ್ದರು.














