ಶೇರಾ: ಸರ್ಕಾರಿ ಶಾಲಾ ವಾರ್ಷಿಕೋತ್ಸವ. ಪ್ರತಿಭಾ ಪುರಸ್ಕಾರ, ಸನ್ಮಾನ,ಸಾಂಸ್ಕೃತಿಕ ಕಾರ್ಯಕ್ರಮ.

Coastal Bulletin
ಶೇರಾ: ಸರ್ಕಾರಿ ಶಾಲಾ ವಾರ್ಷಿಕೋತ್ಸವ. ಪ್ರತಿಭಾ ಪುರಸ್ಕಾರ, ಸನ್ಮಾನ,ಸಾಂಸ್ಕೃತಿಕ ಕಾರ್ಯಕ್ರಮ.

ಬಂಟ್ವಾಳ : ವಿದ್ಯಾಸಂಸ್ಥೆಯ ಬೆಳವಣಿಗೆಗೆ ಊರಿನವರ ಸಹಕಾರ ಅತಿ ಮುಖ್ಯವಾಗಿದೆ. ಶಿಕ್ಷಣ ಕೇವಲ ಪಠ್ಯದಿಂದ ಮಾತ್ರವೇ ದೊರಕಲಾರದು ಅದಕ್ಕೆ ಪೂರಕವಾದ ಸಹಪಠ್ಯಗಳು ಮತ್ತು ಮಕ್ಕಳ ಹವ್ಯಾಸಗಳನ್ನು ಪ್ರತಿಭೆಗಳನ್ನು ಹೊರ ತರುವ ವೇದಿಕೆಯು ಪ್ರಮುಖವಾಗಿದೆ ಈ ದೃಷ್ಟಿಯಲ್ಲಿ ಶಾಲಾ ವಾರ್ಷಿಕೋತ್ಸವಗಳು ಮಕ್ಕಳಿಗೆ ಹೊಸ ಹುರುಪನ್ನು ತಂದು ಶೈಕ್ಷಣಿಕ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಬದುಕಿನಲ್ಲಿ ಉತ್ತಮ ಫಲಿತಾಂಶವನ್ನು ಉಂಟು ಮಾಡುತ್ತವೆ,ಎಂದು ಕಡೇಶಿವಾಲಯ ಗ್ರಾ ಪಂ ಅಧ್ಯಕ್ಷೆ ಭಾರತಿ ಸುರೇಂದ್ರ ರಾವ್ ಹೇಳಿದರು.

ಅವರು ನ.30ನೇ ಶನಿವಾರ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇರಾ ಇಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ಶಾಲೆಗಳ ಅಸ್ತಿತ್ವ ಪೋಷಕರ ಕೈಯಲ್ಲಿದೆ, ಇಂಗ್ಲೀಷ್ ವ್ಯಾಮೋಹಕ್ಕೆ ಬಲಿಯಾಗಿ ಕನ್ನಡ ಶಾಲೆಗಳು ಮುಚ್ಚುವ ಪರಿಸ್ಥಿತಿಗೆ ಬಂದಿದೆ, ಪೋಷಕರು ಮಕ್ಕಳಿಗೆ ಆಸ್ತಿ ಮಾಡದೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಮಕ್ಕಳನ್ನೇ ಆಸ್ತಿ ಮಾಡಿ ಎಂದು ಕಡೇಶಿವಾಲಯ ಗ್ರಾ ಪಂ ಮಾಜಿ ಅಧ್ಯಕ್ಷ ಸುರೇಶ್ ಬನಾರಿ ಹೇಳಿದರು.

ಈ ಸಂದರ್ಭದಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯ ಶಿಕ್ಷಕಿ ಕೋಮಲಾಂಗಿ ಬಾಬು ಗೌಡ ದಂಪತಿಗಳನ್ನು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕ ಲೋಕಯ್ಯ ಶೇರಾ ರವರನ್ನು ಶಾಲಾಭಿವೃದ್ಧಿ ಸಮಿತಿಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಕಡೇಶಿವಾಲಯ ಗ್ರಾಮದ ಸ್ವಚ್ಛತಾ ಸೇನಾಣಿಗಳಾದ ಲಕ್ಷ್ಮಿ,ಪ್ರಮೀಳಾ,ಸವಿತಾ ರವರನ್ನು ಅಭಿನಂದಿಸಲಾಯಿತು.

ಶಾಲಾ ವಾರ್ಷಿಕೋತ್ಸವ ನಿಮಿತ್ತ ಅಂಗನವಾಡಿ ಪುಟಾಣಿಗಳಿಗೆ ಹಾಗೂ ಶಾಲಾ ಮಕ್ಕಳಿಗೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ಕಲಿಕೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ

ಮಕ್ಕಳಿಗೆ ದಾನಿಗಳು ನೀಡಿದ ನಗದು ಬಹುಮಾನ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಶಾಲೆಯ ಅಭಿವೃದ್ಧಿಯ ದೃಷ್ಟಿಯಲ್ಲಿ ವಿಶೇಷವಾಗಿ ಸಹಕರಿಸಿದವರನ್ನು ಗುರುತಿಸಿ ಸ್ಮರಣೆ ಕೆ ನೀಡಿ ಗೌರವಿಸಲಾಯಿತು.ಹಿರಿಯ ವಿದ್ಯಾರ್ಥಿಗಳಿಗೆ ನಡೆಸಿದ ಕ್ರೀಡಾಕೂಟದ ಬಹುಮಾನ ವಿತರಿಸಲಾಯಿತು.

  ವೇದಿಕೆಯಲ್ಲಿ ಮಾಣಿ ರೋಟರಿ ಕ್ಲಬ್ ಅಧ್ಯಕ್ಷ ಪುಷ್ಪರಾಜ್ ಹೆಗ್ಡೆ, ಐಡಿಯಲ್ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲಕ ಗಂಗಾಧರ್ ಶೇರಾ, ಬಿರುವೆರ್ ಕಡೇಶಿವಾಲಯದ ಅಧ್ಯಕ್ಷ ನಿವೃತ್ತ ಸೈನಿಕ ವಿದ್ಯಾದರ ಪೂಜಾರಿ, ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷ ನಾಗೇಶ್ ಕರ್ಕೇರ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಚಂದ್ರಶೇಖರ,ಮಾಜಿ ಅಧ್ಯಕ್ಷ ಚೆನ್ನಪ್ಪ ಎಸ್ ಅಂಜನ್, ಉಪಾಧ್ಯಕ್ಷೆ ಉಷಾ, ಮಾಜಿ ಉಪಾಧ್ಯಕ್ಷ ಮಹಮ್ಮದ್ ಹಬೀಬ್, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಿದಾನಂದ, ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಮಕ್ಕಳು ಪ್ರಾರ್ಥಿಸಿ, ಪ್ರಭಾರ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಸ್ವಾಗತಿಸಿ, ಶಿಕ್ಷಕ ಗೋಪಾಲಗೌಡ ಸದರಿ ವರ್ಷದ ವರದಿ ವಾಚಿಸಿ, ಶಿಕ್ಷಕಿ ಸುಮಲತಾ ಬಹುಮಾನಿತರ ಪಟ್ಟಿ ಓದಿದರು, ಶಿಕ್ಷಕಿ ಜೋಸ್ನಾ ಪ್ರಿಯಾ ವಾಸ್ ವಂದಿಸಿದರು. ಶಿಕ್ಷಕಿ ಅನಿತಾ ಕಾರ್ಯಕ್ರಮ ನಿರೂಪಿಸಿದರು. 

ಬಳಿಕ ಅಂಗನವಾಡಿ ಪುಟಾಣಿಗಳಿಂದ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.

Leave a Comment