ಬಂಟ್ವಾಳ: ತಾಲೂಕಿನ ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಎಂಬವರ ಪುತ್ರ ದಿಗಂತ್ ನಾಪತ್ತೆಯಾಗಿ ಕೆಲ ದಿನ ಕಳೆದರೂ ಆತನ ಬಗ್ಗೆ ಇನ್ನೂ ಯಾವುದೇ ಸುಳಿವು ಸಿಗದಿರುವ ಕಾರಣ ಪೊಲೀಸ್ ಇಲಾಖೆಯ ವೈಫಲ್ಯ ಹಾಗೂ ಸರಕಾರದ ಮೇಲೆ ಒತ್ತಡ ಹಾಕಲು ಸ್ಥಳೀಯ ಗ್ರಾಮಸ್ಥರು ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳಿಂದ ಫರಂಗಿಪೇಟೆ ಜಂಕ್ಷನ್ ನಲ್ಲಿ ಫೆ. 1ರಂದು ಶನಿವಾರ ಬೃಹತ್ ಪ್ರತಿಭಟನೆ ಮಾಡಿ ಬಾಲಕನ ಪತ್ತೆಗೆ ಒತ್ತಾಯ ಮಾಡಲಾಯಿತು.ಈ ಸಂದರ್ಭದಲ್ಲಿ ಕೆಲ ಕಾಲ ಪೇಟೆಯಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.
ಈ ಸಂದರ್ಭ ಮಾತನಾಡಿದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯತೀಶ್ ಎನ್ ಮಾತನಾಡಿ, ತಂಡಗಳಾಗಿ ನಾವು ತನಿಖೆ ನಡೆಸುತ್ತಿದ್ದು, ಕ್ಲಿಷ್ಟಕರವಾದ ಪ್ರಕರಣಗಳು ಸ್ವಲ್ಪ ಸಮಯ ತಗಲುತ್ತದೆ. ಜಿಲ್ಲೆಯ ವಿವಿಧ ಠಾಣೆಯ ನುರಿತ ಪೋಲೀಸರನ್ನು ಕರೆಸಿ ತನಿಖೆ ದುಪ್ಪಟ್ಟು ಗೊಳಿಸುತ್ತೇವೆ. ದಿಗಂತ್ ಪತ್ತೆಯಾಗುವವರೆಗೆ ನಾವು ವಿರಮಿಸಲಾರೆವು ಎಂದರು.ತನಿಖೆ ಮುಂದುವರಿಸಲು ನಿಮ್ಮ ಸಹಕಾರ ಅಗತ್ಯ ಎಂದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಂಸದ ಕ್ಯಾ, ಬ್ರಿಜೇಶ್ ಚೌಟ ಮಾತನಾಡಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ಗಾಂಜಾ ವಿರುದ್ಧ ಪೋಲೀಸರು ತನಿಖೆ ಮುಂದುವರಿಸಿ ಸೂಕ್ತವಾದ ಕಾನೂನು ಕ್ರಮ ಕೈಗೊಂಡರೆ ಇಂತಹ ಘಟನೆಗಳು ಮರುಕಳಿಸಲಿಕ್ಕಿಲ್ಲ. ಪೊಲೀಸರು ಸದೃಢ ತನಿಖೆ ನಡೆಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ
ಹರೀಶ್ ಪೂಂಜ, ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದರು.ಎರಡು ದಿನಗಳಲ್ಲಿ ಬಾಲಕ ಪತ್ತೆಯಾಗದಿದ್ದರೆ, ಪ್ರತಿಭಟನೆ ತೀವ್ರಗೊಳಿಸುವುದಾಗಿ ಪ್ರತಿಭಟನಕಾರರು ಎಚ್ಚರಿಸಿದರು.
ಪ್ರಮುಖರಾದ ಉಮೇಶ್ ಶೆಟ್ಟಿ ಬರ್ಕೆ,ನ್ಯಾಯವಾದಿ ಪ್ರಸಾದ್ ಕುಮಾರ್ ರೈ, ಭರತ್ ಕುಮ್ಮೆಲು,ತಾರಾನಾಥ ಕೊಟ್ಟಾರಿ ತೇವು, ನಂದನ್ ಮಲ್ಯ,ಧನರಾಜ್ ತೇವು, ಮನೋಜ್ ಆಚಾರ್ಯ, ರವೀಂದ್ರ ಕಂಬಳಿ ಮತ್ತಿತರರು ಇದ್ದರು.
ಈ ಸಂದರ್ಭ ಪ್ರಮುಖರಾದ ಉಮೇಶ್ ಶೆಟ್ಟಿ ಬರ್ಕೆ, ಚಂದ್ರಶೇಖರ ಗಾಂಭೀರ, ಭರತ್ ಕುಮ್ಡೇಲು, ಪ್ರಸಾದ್ ಕುಮಾರ್, ಮನೋಜ್ ಆಚಾರ್ಯ ನಾಣ್ಯ, ಪದ್ಮನಾಭ ಶೆಟ್ಟಿ ಕಿದೆಬೆಟ್ಟು, ಧನರಾಜ್ ತೇವು, ವಿಠ್ಠಲ್ ಆಳ್ವ, ಮತ್ತಿತರರು ಇದ್ದರು.














