ಬಂಟ್ವಾಳ :ತಾಲೂಕಿನ ಕಳ್ಳಿಗೆ ಗ್ರಾಮದ ಲಕ್ಷ್ಮೀ ವಿಷ್ಣು ಸೇವಾ ಸಂಘ (ರಿ.)ಹಾಗೂ ಲಕ್ಷ್ಮೀ ವಿಷ್ಣು ಸೇವಾ ಮಾತೃ ಮಂಡಳಿ (ರಿ.)ಇದರ ತೃತೀಯ ವರ್ಷದ ವಾರ್ಷಿಕೋತ್ಸವವು ಫೆ. 8ರಂದು ಶನಿವಾರ ಜಾರಂದಗುಡ್ಡೆಯಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ ಸಾಮೂಹಿಕ ಶ್ರೀ ಶನಿಪೂಜೆ ನಡೆದು ಮಧ್ಯಾಹ್ನ ಮಹಾಪೂಜೆಯ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.ಸಂಜೆ 6.30ಯಿಂದ ಅಂಗನವಾಡಿ ಪುಟಾಣಿಗಳಿಂದ ಹಾಗೂ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ.
ಬಳಿಕ ಧಾರ್ಮಿಕ ಸಭೆ ನಡೆಯಲಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಖ್ಯಾತ ವಾಗ್ಮಿ ಶ್ರೀಕಾಂತ್
ಶೆಟ್ಟಿ ಕಾರ್ಕಳ ಪ್ರಮುಖ ಭಾಷಣ ಮಾಡಲಿದ್ದು,ಈ ಸಂದರ್ಭದಲ್ಲಿ ಅನೇಕ ಗಣ್ಯರ ಉಪಸ್ಥಿತಿ ಇರಲಿದೆ.
ಬಳಿಕ ವಿಶ್ವಾಸ್ ಮ್ಯೂಸಿಕಲ್ ಮಂಗಳೂರು ಇವರಿಂದ ಸಂಗೀತ ರಸ ಸಂಜೆ ಹಾಗೂ ಶಾರದಾ ಆರ್ಟ್ಸ್ ಕಲಾವಿದರು (ರಿ) ಮಂಜೇಶ್ವರ ಇವರಿಂದ "ಕಥೆ ಎಡ್ಡೆಂಡು"ಎಂಬ ತುಳು ಹಾಸ್ಯಮಯ ನಾಟಕ ಜರುಗಲಿದೆ ಎಂದು ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.














