Coastal Bulletin

ಬಂಟ್ವಾಳ: ಇತಿಹಾಸ ಪ್ರಸಿದ್ಧ ಭೂಕೈಲಾಸ ಪ್ರತೀತಿಯ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ, ಜಾತ್ರೋತ್ಸವ ಪ್ರಯಕ್ತ ಬುಧವಾರ ಮಧ್ಯರಾತ್ರಿ ಭಕ್ತಸಾಗರದ ಮಧ್ಯೆ ವಿಶೇಷ ಕಾರ್ಯಕ್ರಮವಾದ ಶ್ರೀ ಪಾರ್ವತಿ-ಪರಮೇಶ್ವರರ ಭೇಟಿ ನಡೆಯಿತು.

ಚಂದ್ರ ಮಂಡಲ ಉತ್ಸವದ ಪ್ರಯುಕ್ತ ಬೆಳಗ್ಗೆ ಶ್ರೀ ಪಾರ್ವತಿ ಸನ್ನಿಧಿಯಲ್ಲಿ ದರ್ಶನಬಲಿ, ಮಧ್ಯಾಹ್ನ ಮಹಾಪೂಜೆ,ಅನ್ನಸಂತರ್ಪಣೆ ನಡೆಯಿತು. ರಾತ್ರಿ ಬಲ್ಲೋಡಿ ಮಾಗಣೆ ಗುತ್ತಿನಿಂದ ಶ್ರೀ ಕೊಡಮಣಿತ್ತಾಯ ದೈವದ ಭಂಡಾರ ಆಗಮಿಸಿತು. ರಾತ್ರಿ ಜಾತ್ರೋತ್ಸವದಲ್ಲಿ ಪ್ರಮುಖ ಆಕರ್ಷಣೆಯಾಗಿರುವ ಪಾರ್ವತಿ-ಪರಮೇಶ್ವರ ದೇವರ ಭೇಟಿ ನಡೆಯಿತು. ಬಳಿಕ ಚಂದ್ರ ಮಂಡಲ ಉತ್ಸವ, ಬೆಳಗ್ಗೆ ಶಯನೋತ್ಸವ ಕವಾಟ ಬಂಧನ,ಪ್ರಸಾದ ವಿತರಣೆ ನಡೆಯಿತು.ಮಹಾಶಿವರಾತ್ರಿ ಜಾತ್ರೋತ್ಸವದಲ್ಲಿ ಸಾವಿರಾರು ಭಕ್ತಾಧಿಗಳು ಪಾಲ್ಗೊಂಡರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್

ಉಳಿಪ್ಪಾಡಿಗುತ್ತು, ಮಾಜಿ ಸಚಿವ ಬಿ.ರಮಾನಾಥ ರೈ, ಜಿ.ಪಂ.ಮಾಜಿ ಸದಸ್ಯ ಬಿ.ಪದ್ಮಶೇಖರ ಜೈನ್,ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕ ಸುದರ್ಶನ್ ಬಜ,ಪುರುಷೋತ್ತಮ ಶೆಟ್ಟಿ ವಾಮದಪದವು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಪುಳಿಮಜಲು, ಸಮಿತಿ ಸದಸ್ಯರು, ಗ್ರಾಮಣಿಗಳು, ಕಾವಳಮೂಡೂರು ಗ್ರಾ.ಪಂ.ಅಧ್ಯಕ್ಷೆ ಜಯಲಕ್ಷ್ಮಿ, ಉಪಾಧ್ಯಕ್ಷ ಅಜಿತ್ ಶೆಟ್ಟಿ ಕಾರಿಂಜ, ಗ್ರಾಮ ಕರಣಿಕೆ ಆಶಾ ಮೆಹಂದಳೆ,ಪಿಡಿಒ ರಚನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

 

Leave a Comment