Coastal Bulletin

ಬಂಟ್ವಾಳ: ಜಿಲ್ಲೆಯಾದ್ಯಂತ ಜಾತ್ರೆ ಮತ್ತಿತರ ಕಡೆಗಳಲ್ಲಿ ಸಂತೆ ವ್ಯಾಪಾರ ನಡೆಸುತ್ತಿರುವ ಸುಮಾರು 150ಕ್ಕೂ ಮಿಕ್ಕಿ ಮಂದಿ ಒಟ್ಟಾಗಿ 'ಹಿಂದೂ ಜಾತ್ರೆ ವ್ಯಾಪಾರಸ್ಥರ ಸಂಘ' ರಚಿಸಲಾಗಿದ್ದು, ಇದೇ 5ರಂದು ಬೆಳಿಗ್ಗೆ 10.30 ಗಂಟೆಗೆ ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಜಯರಾಮ ಶೆಟ್ಟಿಗಾರ್ ಹೇಳಿದ್ದಾರೆ.

ಇಲ್ಲಿನ ಬಿ.ಸಿ.ರೋಡಿನಲ್ಲಿ ಗುರುವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕೆಲವೊಂದು ಜಾತ್ರೆಗಳಲ್ಲಿ ಸ್ಥಳಾವಕಾಶ ಪಡೆಯಲು ಮಧ್ಯವರ್ತಿಗಳು ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ. ಕೆಲವೆಡೆ ವ್ಯಾಪಾರಸ್ಥರು ದೌರ್ಜನ್ಯ ಎದುರಿಸುವ ಸನ್ನಿವೇಶವೂ ಸೃಷ್ಟಿಯಾಗುತ್ತಿದೆ. ಇದಕ್ಕಾಗಿ ನಾವು ಸಂಘಟಿತರಾಗಿ ಸಂತೆ ವ್ಯಾಪಾರಸ್ಥರ ಸಮಸ್ಯೆಗಳಿಗೆ ಸ್ಪಂದಿಸುತ್ತೇವೆ ಎಮದು ಅವರು ತಿಳಿಸಿದರು.

ಆರ್ ಎಸ್ ಎಸ್

ಮುಖಂಡ ಡಾ.ಕೆ.ಪ್ರಭಾಕರ ಭಟ್ ಕಲ್ಲಡ್ಕ ಸಂಘಟನೆ ಉದ್ಘಾಟಿಸಲಿದ್ದು, ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು, ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತಿತರ ಗಣ್ಯರು ಭಾಗವಹಿಸುವರು ಎಂದರು.

ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಸತೀಶ ಬಂಗೇರ, ಪ್ರಕಾಶ ಪೂಜಾರಿ, ತುಕಾರಾಮ ಕುಲಾಲ್, ರವೀಂದ್ರದಾಸ್ ಕಲ್ಲಡ್ಕ ಇದ್ದರು

Leave a Comment