ಬಂಟ್ವಾಳ :ತಾಲೂಕಿನ ಅಮ್ಮುಂಜೆ ಗ್ರಾಮದ ಅಂಬಿಕಾ ಸೇವಾ ಸಂಘ (ರಿ)ಕಲಾಯಿ ಇದರ 50ನೇ ವರುಷದ ಸುವರ್ಣ ಮಹೋತ್ಸವ ಸಮಾರಂಭ ಮಾ.7ಹಾಗೂ 08ರಂದು ವೈದಿಕ, ಧಾರ್ಮಿಕ, ಸಾಂಸ್ಕೃತಿಕ, ಸಭಾ ಕಾರ್ಯಕ್ರಮದೊಂದಿಗೆ ವಿಜೃಂಭಣೆಯಿಂದ ಸಂಘದ ವಠಾರದಲ್ಲಿ ನಡೆಯಲಿದೆ.
ಮಾ. 7ರಂದು ಬೆಳಿಗ್ಗೆ 8.00ರಿಂದ ಗಣಹೋಮ ಬಳಿಕ ಭಜನಾ ಕಾರ್ಯಕ್ರಮ, ಮಧ್ಯಾಹ್ನ 12.30ಕ್ಕೆ ಶ್ರೀ ದೇವಿಗೆ ಮಹಾಪೂಜೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ 3ರಿಂದ ಶ್ರೀ ಅಂಬಿಕಾ ಯಕ್ಷಗಾನ ಕಲಾ ಮಂಡಳಿ ಕಲಾಯಿ ಮತ್ತು ಅತಿಥಿ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆ,ಸಂಜೆ ಶಶಿಧರ್ ಭಟ್ ಇವರ ನೇತೃತ್ವದಲ್ಲಿ ಶ್ರೀದುರ್ಗಾನಮಸ್ಕಾರ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.
ಮಾ. 8ರಂದು ಬೆಳಿಗ್ಗೆ 9ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮದ್ಯಾಹ್ನ ಶ್ರೀ ದೇವಿಗೆ ಮಹಾಪೂಜೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.ಅಪರಾಹ್ನ3ರಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಲಿದೆ
ಸಂಜೆ ಗಂಟೆ 4.30ಕ್ಕೆಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ
ಮೇಳದ ಶ್ರೀದೇವರು ಚೌಕಿಗೆ ಹೊರಡುವುದು.5.30ಯಿಂದ
ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.6 30ಯಿಂದ ಸುವರ್ಣ ಮಹೋತ್ಸವದ ಸಭಾ ಸಮಾರಂಭದಲ್ಲಿ ಒಡಿಯೂರು ಶ್ರೀಗಳು ಆಶೀರ್ವಚನ ನೀಡಲಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ, ಮಾಜಿ ಸಚಿವ ಬಿ ರಮಾನಾಥ ರೈ ಸಹಿತ ಅನೇಕ ಗಣ್ಯರು ಉಪಸ್ಥಿತರಿರುವರು, ಈ ಸಂದರ್ಭದಲ್ಲಿ ಸಾಧಕರಿಗೆ ಸಂಘ ಸಂಸ್ಥೆಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ
ರಾತ್ರಿ ಗಂಟೆ 9.00ರಿಂದ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಪೌರಾಣಿಕ ಯಕ್ಷಗಾನ ಬಯಲಾಟ "ಶ್ರೀ ದೇವಿ ಲಲಿತೋಪಖ್ಯಾನ”ಪ್ರದರ್ಶನ ಗೊಳ್ಳಲಿದೆ,ರಾತ್ರಿ ಚೌಕಿ ಪೂಜೆಯ ನಂತರ ಅನ್ನಸಂತರ್ಪಣೆ ನಡೆಯಲಿದೆ ಎಂದು ಸುವರ್ಣ ಮಹೋತ್ಸವ ಸಮಿತಿಯ ಪ್ರ ಕಾರ್ಯದರ್ಶಿ ಗಣೇಶ್ ಕೆ ಪ್ರಕಟಣೆಯಲ್ಲಿ ತಿಳಿಸಿದೆ.












