ಬಂಟ್ವಾಳ :ಬಿ ಸಿ ರೋಡ್ ಇಲ್ಲಿಯ ಶ್ರೀ ಸಾಯಿ ಕಿಡ್ಸ್ ಝೋನ್ ವಿದ್ಯಾ ಸಂಸ್ಥೆಯ ಪೂರ್ವ ಪ್ರಾಥಮಿಕ ತರಗತಿ ಕಿಂಡರ್ ಗಾರ್ಟನ್ ವಿಭಾಗದ ಪದವಿ ಪ್ರಧಾನ ಸಮಾರಂಭ ಶಾಲೆಯಲ್ಲಿ ನಡೆಯಿತು. ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಮೋಹನ್ ದಾಸ್ ಕೊಟ್ಟರಿಯವರು ಮಕ್ಕಳಿಗೆ ಪದವಿ ಪ್ರಧಾನ ಮಾಡಿ ಶುಭ ಹಾರೈಸಿದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಐತಪ್ಪ ಪೂಜಾರಿ ವಹಿಸಿದ್ದರು.ವೇದಿಕೆಯಲ್ಲಿ ಶಾಲೆಯ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಅಭಿಲಾಶ್ ಭಟ್ ಉಪಸ್ಥಿತರಿದ್ದರು.
ಆಡಳಿತ ಮಂಡಳಿಯ ಸದಸ್ಯೆ ಆರತಿ
ಅಮೀನ್ ಪ್ರಾಸ್ತಾವಿಕ ದೊಂದಿಗೆ ಸ್ವಾಗತಿಸಿ,ಶಿಕ್ಷಕಿ ಸುಚಿತ ವಂದಿಸಿ ಶಿಕ್ಷಕಿ ದೀಕ್ಷಿತ ಕಾರ್ಯಕ್ರಮ ನಿರೂಪಿಸಿದರು. ಮಕ್ಕಳ ಪೋಷಕರು,ಶಾಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಳಿಕ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ ನಡೆಯಿತು.









