Coastal Bulletin

ಮಂಗಳೂರಿನ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಸಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಯವರಿಗೆ ಭಕ್ತಿ ಪೂರ್ವಕವಾಗಿ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಮಾಣಿಲ ದ ಪರಮಪೂಜ್ಯ ಶ್ರೀ ಮೋಹನ ದಾಸ ಪರಮಹಂಸ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ದೇವಸ್ಥಾನದ ಆಡಳಿತ ಯವರು ನೀಡಿದರು.

ಈ ಸಂದರ್ಭದಲ್ಲಿ ,ಜೀರ್ಣೋದ್ದಾರ ಸಮಿತಿ ಅಧ್ಯಕ್ಷರು ದಾಮೋದರ ಎ,ಬ್ರಹ್ಮಕಲಶೋತ್ಸವದ ಅಧ್ಯಕ್ಷರಾದ ಬಿ ಪ್ರೇಮಾನಂದ ಕುಲಾಲ್, ಕ್ಷೇತ್ರದ ಮೋಕ್ತೇಸರ ಮೋಹನ್ ದಾಸ್ ಅಳಪೆ,

ವಿಶ್ವ ಭಾರತಿ ಫ್ರೆಂಡ್ ಸರ್ಕಲ್ ನ ಕಾರ್ಯದರ್ಶಿ ರಾಜೇಶ್ ಸಾಲಿಯಾನ್ ಉಪಸ್ಥಿತರಿದ್ದರು.

ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಮೇ 20ರಂದು ಸಂಜೆ 5:00ಗೆ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಚನ ನೀಡಲಿದ್ದಾರೆ.

Leave a Comment