ಬಂಟ್ವಾಳ: ತಾಲೂಕು ಬಿಲ್ಲವ ಮಹಿಳಾ ಸಮಿತಿಯ ನೂತನ ಅಧ್ಯಕ್ಷರಾಗಿ ,ನ್ಯಾಯವಾದಿ ಪ್ರತಿಷ್ಠಿತ ಕರ್ನಾಟಕ ಸರಕಾರದ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತರು ,ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು ಶ್ರೀಮತಿ ಶೈಲಜಾ ರಾಜೇಶ್ ಅವಿರೋಧ ಆಯ್ಕೆಯಾಗಿದ್ದಾರೆ.
ಇತರ ಪದಾಧಿಕಾರಿಗಳಾಗಿ, ಉಪಾಧ್ಯಕ್ಷರಾಗಿ..ಶ್ರೀಮತಿ ರಾಗಿಣಿ,ಕಾರ್ಯದರ್ಶಿಯಾಗಿ..ರಶ್ಮಿ ಸತೀಶ್ ಜೊತೆ ಕಾರ್ಯದರ್ಶಿಯಾಗಿ ಸರೋಜಿನಿ,ಖಜಾಂಚಿ ಯಾಗಿ ಶ್ರೀಮತಿ ಸುಜಾತಾ ದಿನೇಶ್ ಇವರನ್ನು ಆಯ್ಕೆ ಮಾಡಲಾಯಿತು.
ಬಿಸಿರೋಡಿನ ಗಾಣದ ಪಡ್ಪು ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಜೂ02ರಂದು ಆದಿತ್ಯವಾರ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.ತಾಲೂಕು ಬಿಲ್ಲವ ಮಹಿಳಾ
ಸಮಿತಿಯ ವಾರ್ಷಿಕ ಮಹಾಸಭೆಯಲ್ಲಿ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ ರೇವತಿ ಬಡಗಬೆಲ್ಲೂರು ಇವರ ಅಧ್ಯಕ್ಷತೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.ಮಾಜಿ ಅಧ್ಯಕ್ಷರು ನಯನ,ಮಾಲತಿ,ಭಾರತಿ ಕುಂದರ್,ಜಯಲಕ್ಷ್ಮಿ ಉಪಸ್ಥಿತರಿದ್ದರು,ಅಲ್ಲದೆ ಬಿಲ್ಲವ ಸಂಘದ ಕಾರ್ಯದರ್ಶಿ, ಪದಾಧಿಕಾರಿಗಳು, ಉಪಸ್ಥಿತರಿದ್ದರು, ಕಾರ್ಯದರ್ಶಿ ಲಲಿತಾ ವಂದಿಸಿದರು.ಭವಾನಿ ಸ್ವಾಗತಿಸಿದರು















