Coastal Bulletin

ಬಂಟ್ವಾಳ:ಬಂಟ್ವಾಳ ತಾಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ಮಂಗಳವಾರ ವಿಶೇಷ ಪೂಜೆ ನಡೆಯಿತು.

ಬೆಳಗ್ಗೆ ದೇವರಿಗೆ ಕ್ಷೀರಾಭಿಷೇಕ ಮತ್ತು ಪಂಚಾಮೃತ ಅಭಿಷೇಕ ನಡೆಯಿತು. ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ಭಜನ ತಂಡದವರಿಂದ ಭಜನ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಕರೆಂಕಿಜೆ, ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಚೌಟ, ಆನುವಂಶಿಕ ಪ್ರಧಾನ ಅರ್ಚಕ ಕೆ.ಸುಂದರ ಹೊಳ್ಳ, ರಾಜಾ ಎಸ್. ಹೊಳ್ಳ ಪತ್ತುಮುಡಿ, ವ್ಯವಸ್ಥಾಪನಾ

ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬದನಡಿ,  ಪ್ರಧಾನ ಕಾರ್ಯದರ್ಶಿ ರಾಜೇಶ ಗೋವಿಂದ ಬೆಟ್ಟು, ರಶ್ಮಿತ್ ಶೆಟ್ಟಿ ಕೈತ್ರೋಡಿ, ಶರತ್ ಕುಮಾರ್ ಕೊಯಿಲ,  ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ, ಮೋಹನ್ ಕೆ.ಶ್ರೀಯಾನ್ ರಾಯಿ, ದಿನೇಶ ಸುವರ್ಣ ಲೋಕೇಶ ಕೈತ್ರೋಡಿ, ನಳಿನಾಕ್ಷಿ ಮೋಹನ ಪೂಜಾರಿ, ಯಮುನ ತಿಮ್ಮಪ್ಪ ಪೂಜಾರಿ, ಸಂತೋಷ್ ಕುಮಾರ್ ಬೆಟ್ಟು, ಅರ್ಚಕ ನಾಗೇಶ ರಾವ್  ಮತ್ತಿತರರಿದ್ದರು.  

Leave a Comment