Coastal Bulletin

ಮೂಡಬಿದಿರೆ : ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮೂಡುಬಿದಿರೆಯ ಬನ್ನಡ್ಕದ ರಾಘವೇಂದ್ರ ಮಠದ ಬಳಿ ನಡೆದಿದೆ. ಈ ಘಟನೆಯಲ್ಲಿ ಹಲವು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಮಂಗಳೂರಿನಿಂದ ಮೂಡುಬಿದಿರೆ ಮಾರ್ಗವಾಗಿ ಕಾರ್ಕಳ ಕಡೆಗೆ ಹೋಗುತಿದ್ದ ಖಾಸಗಿ ಬಸ್ ಬನ್ನಡ್ಕದ ರಾಘವೇಂದ್ರ ಮಠದ ಮುಂಭಾಗಕ್ಕೆ

ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಪಿಯಾಗಿದೆ.

ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Comment