ಬಂಟ್ವಾಳ :ಕಾರಿಂಜ ದೇವಸ್ಥಾನದ ಒಳಗೆ ಪಾದರಕ್ಷೆ ಹಾಕಿಕೊಂಡು ಪ್ರವೇಶ ಮಾಡಿರುವುದು ದೇವಳದ ಪಾವಿತ್ರ್ಯತೆಗೆ ಧಕ್ಕೆಯಾಗಿದೆ ಇದು ಭಕ್ತರ ಮನಸ್ಸಿಗೂ ಬೇಸರ ತರುವ ವಿಚಾರವಾಗಿದ್ದು ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಶಾಸಕರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.
ಇತಿಹಾಸ ಪ್ರಸಿದ್ಧ ಬಂಟ್ವಾಳ ತಾಲೂಕಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಅಂಗಣಕ್ಕೆ ಅನ್ಯ ಧರ್ಮದ ಯವಕರ ಗುಂಪು ಪ್ರವೇಶಿಸಿ ದೇವಸ್ಥಾನದ ಪಾವಿತ್ರ್ಯತೆಗೆ ದಕ್ಕೆ ತಂದುದಲ್ಲದೇ ದೇವಸ್ಥಾನದ ವಠಾರದಲ್ಲಿ ವಿಕೃತಿ ಮೆರೆದ ವೀಡಿಯೋ ಒಂದು ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದ್ದು ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತರಲಾಗಿದೆ.
ಈ ವಿಷಯ ತಿಳಿದ ತಕ್ಷಣ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು
ಉನ್ನತ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಘಟನೆಯ ಬಗ್ಗೆ ತಿಳಿಸಿ ಸೂಕ್ತ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿರುತ್ತಾರೆ.
ಈ ರೀತಿಯ ಘಟನೆಗಳು ಇತ್ತೀಚೆಗಿನ ದಿನಗಳಲ್ಲಿ ಅಲ್ಲಲ್ಲಿ ನಡೆಯುತ್ತಿದ್ದು ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಬಂಟ್ವಾಳದಲ್ಲಿ ಶಾಂತಿಯನ್ನು ಕದಡಲು ಪ್ರಯತ್ನಿಸಿದ ದುಷ್ಕರ್ಮಿಗಳನ್ನು ಮಟ್ಟ ಹಾಕಲು ಕಾನೂನು ರಿತ್ಯ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ.














