ಮಠ, ಎದ್ದೇಳು ಮಂಜುನಾಥ ಖ್ಯಾತಿಯ ಕನ್ನಡ ಸಿನಿಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾದನಾಯಕನ ಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮಠ ಸಿನಿಮಾ ನಿರ್ದೇಶಕ ಗುರುಪ್ರಸಾದ್ (52) ಮೃತದೇಹ ಪತ್ತೆಯಾಗಿದೆ
ಸಾಲಗಾರರ ಕಿರುಕುಳದಿಂದ ಅವರು ಬೇಸತ್ತಿದ್ದರು ಎಂದು ಹೇಳಲಾಗುತ್ತಿದೆ. ಮಠ, ಎದ್ದೇಳು ಮಂಜುನಾಥ ಸೇರಿ ಕೆಲವು ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದರು. ಘಟನಾ ಸ್ಥಳಕ್ಕೆ ಮಾದನಾಯಕನ ಹಳ್ಳಿ ಪೊಲೀಸರು ಭೇಟಿ ನೀಡಿದ್ದು ಸ್ಥಳ ಪರಿಶೀಲನೆ ಮಾಡುತ್ತಿದ್ದಾರೆ.
ಹಲವು ರಿಯಾಲಿಟಿ ಶೋಗಳಲ್ಲಿ ಜಡ್ಜ್ ಆಗಿಯೂ ಕೆಲಸ ಮಾಡಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಡೆತ್‌ನೋಟ್ ಕೂಡ ಸಿಕ್ಕಿಲ್ಲ. 5
ಕನ್ನಡ ಚಿತ್ರಗಳನ್ನ ನಿರ್ದೇಶಿಸಿರುವ ಗುರುಪ್ರಸಾದ್ ಅವರು ಸಾಕಷ್ಟು ಜನರಿಗೆ ಪರಿಚಿತರು. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ. ಅವರ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನೆಲದ ಮೇಲೆ ರಕ್ತ ಚೆಲ್ಲಿದೆ. ತಲೆಗೆ ಒಂದು ಬಟ್ಟೆಯನ್ನು ಕಟ್ಟಿಕೊಂಡಿದ್ದಾರೆ. ಇದೆಲ್ಲವನ್ನೂ ಗಮನಿಸಿದರೆ ಅವರು ಹತ್ತು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ಇದೆ.















