ಫರಂಗಿಪೇಟೆ :ಶ್ರೀ ಆಂಜನೇಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ.

Coastal Bulletin
ಫರಂಗಿಪೇಟೆ :ಶ್ರೀ ಆಂಜನೇಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ.

ಬಂಟ್ವಾಳ :ಫರಂಗಿಪೇಟೆಯ ವಿಜಯ ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶೀಲಾಮಯ ಶ್ರೀ ಆಂಜನೇಯ ದೇವಸ್ಥಾನದ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕವು ಜ.21ರಿಂದ 26ರ ವರೆಗೆ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಡಿ.03ರಂದು ಆದಿತ್ಯವಾರ ಫರಂಗಿಪೇಟೆಯ ವೀರಾಂಜನೇಯ ವ್ಯಾಯಾಮ ಶಾಲೆ ನಡೆಯಿತು.

ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದ ಶ್ರೀ ಆಂಜನೇಯ ದೇವಸ್ಥಾನ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಅಜಿತ್ ಚೌಟ ದೇವಸ್ಯ ಮಾತನಾಡಿ ನೂತನ ದೇವಸ್ಥಾನ ನಿರ್ಮಾಣಗೊಂಡು ಹಿಂದೂ ಸಮಾಜದ ಶ್ರದ್ದಾ ಕೇಂದ್ರವಾಗುದರೊಂದಿಗೆ ಶಕ್ತಿಕೇಂದ್ರವಾಗಿ ರುಪುಗೊಳ್ಳಲಿ, ಸರ್ವರೂ ದೇವತಾ ಕಾರ್ಯದಲ್ಲಿ ಕೈಜೋಡಿಸಿ ಬ್ರಹ್ಮಕಲಶೋತ್ಸವ ಯಶಸ್ವಿಗೊಸಬೇಕಾಗಿ ಸಹಕರಿಸಬೇಕೆಂದು ಹೇಳಿದರು.

ಶ್ರೀ ಆಂಜನೇಯ ದೇವಸ್ಥಾನ ನಿರ್ಮಾಣ ಸಮಿತಿಯ ಪ್ರ.ಕಾರ್ಯದರ್ಶಿ ಉಮೇಶ್ ಶೆಟ್ಟಿ ಬರ್ಕೆ ಪ್ರಾಸ್ತವಿಕವಾಗಿ ಮಾತನಾಡಿ ಶ್ರೀ ಆಂಜನೇಯ ದೇವರ ಅನುಗ್ರಹದಿಂದ ನೂತನ ದೇವಸ್ಥಾನದ ಕೆಲಸ ಕಾರ್ಯಗಳು ಸುಸೂತ್ರವಾಗಿ ನಡೆಯುತ್ತಿದ್ದು, ಭಕ್ತರ ಪಾಲ್ಗೊಳ್ಳುವಿಕೆಯಿಂದ ಕೆಲಸ ಕಾರ್ಯಗಳಿಗೆ ಹೆಚ್ಚಿನ ವೇಗ ದೊರೆಯುತ್ತದೆ, ಎಲ್ಲರೂ ಶ್ರದ್ದಾ ಭಕ್ತಿಯಿಂದ ಬ್ರಹ್ಮಕಲಶೋತ್ಸವದಲ್ಲಿ ಭಾಗಿಯಾಗಿ ಎಂದರು.

ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ

ಭುವನೇಶ್ ಪಚ್ಚಿನಡ್ಕ, ಕಾರ್ಯದ್ಯಕ್ಷರಾದ ಸದಾನಂದ ಆಳ್ವ ಕಂಪ, ಪ್ರಧಾನ ಸಂಚಾಲಕರಾದ ದೇವಸ್ಯ ಪ್ರಕಾಶ್ಚಂದ್ರ ರೈ, ಪ್ರದಾನ ಕಾರ್ಯದರ್ಶಿ ದೇವಿ ಪ್ರಸಾದ್ ಶೆಟ್ಟಿ ಕೊಡ್ಮಾನ್, ಕೋಶಾಧಿಕಾರಿ ಉಮೇಶ್ ಸಾಲ್ಯಾನ್ ಬೆಂಜನಪದವು, ನಿರ್ಮಾಣ ಸಮಿತಿಯ ಕಾರ್ಯಧ್ಯಕ್ಷರಾದ ಮಹಾಬಲ ಕೊಟ್ಟಾರಿ ಮುನ್ನೂರು, ಪ್ರಧಾನ ಸಂಚಾಲಕರಾದ ವಿಠ್ಠಲ್ ಆಳ್ವ ಗರೋಡಿ, ಶ್ರೀ ಆಂಜನೇಯ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷರಾದ ಚಂದ್ರಶೇಖರ್ ಗಾಂಭೀರ ಸುಜಿರುಗುತ್ತು,ವಿಶ್ವನಾಥ ಶೆಟ್ಟಿ ಕೊಟ್ಟಿಂಜ, ಪುರಾನ್ ಚಂದ್ರ ರೈ ಉಪಸ್ಥಿತರಿದ್ದರು.

ಶ್ರೀ ಅಂಜನಾದೇವಿ ಮಾತೃ ಮಂಡಳಿಯ ಅಧ್ಯಕ್ಷೆ ಕವಿತಾ ದೇವದಾಸ ಅರ್ಕುಳ ಸ್ವಾಗತಿಸಿ, ಆಡಳಿತ ಮಂಡಳಿಯ ಕಾರ್ಯದರ್ಶಿ ಕರುಣಾಕರ ಕೊಟ್ಟಾರಿ ಧನ್ಯವಾದ ವಿತ್ತರು, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದ್ಯಕ್ಷರಾದ ತೇವು ತಾರಾನಾಥ ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು.

Leave a Comment