ಬಿ ಸಿ ರೋಡ್ :ಡಿ.4 ರಂದು ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ.ಬಂಟ್ವಾಳ ಮಂಡಲದಿಂದ1500 ಕ್ಕಿಂತ ಅಧಿಕ ಸಂಖ್ಯೆಯ ಕಾರ್ಯಕರ್ತರು ಭಾಗಿ: ಚೆನ್ನಪ್ಪ ಕೋಟ್ಯಾನ್

Coastal Bulletin
ಬಿ ಸಿ ರೋಡ್ :ಡಿ.4 ರಂದು ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ.ಬಂಟ್ವಾಳ ಮಂಡಲದಿಂದ1500 ಕ್ಕಿಂತ ಅಧಿಕ ಸಂಖ್ಯೆಯ ಕಾರ್ಯಕರ್ತರು ಭಾಗಿ: ಚೆನ್ನಪ್ಪ ಕೋಟ್ಯಾನ್

ಬಂಟ್ವಾಳ : ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಿಂದೂ‌ ಹಿತರಕ್ಷಣಾ ಸಮಿತಿ ವತಿಯಿಂದ ಡಿ.4 ರಂದು ಮಂಗಳೂರಿನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಬಂಟ್ವಾಳ ಮಂಡಲದಿಂದ 1500 ಕ್ಕಿಂತ ಅಧಿಕ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಲಿದ್ದೇವೆ ಎಂದು ಬಂಟ್ವಾಳ ಮಂಡಲ‌ ಬಿಜೆಪಿ‌ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್ ತಿಳಿಸಿದ್ದಾರೆ.

ಬಿಸಿರೋಡಿನ‌ ಪಕ್ಷದ‌ ಕಚೇರಿಯಲ್ಲಿ ಸೋಮವಾರ ಸಂಜೆ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಪ್ರತಿಭಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಮಂಡಲದ‌ ಎಲ್ಲಾ ಶಕ್ತಿಕೇಂದ್ರದ ವ್ಯಾಪ್ತಿಯಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸಲಾಗಿದ್ದು, ಬಂಟ್ವಾಳ ಮಂಡಲದ ಎಲ್ಲಾ ಮಹಾಶಕ್ತಿ ಕೇಂದ್ರಗಳಲ್ಲಿ ಶಕ್ತಿಕೇಂದ್ರದ ಪ್ರಮುಖರು, ಬೂತ್ ಸಮಿತಿಯ ಅಧ್ಯಕ್ಷರು, ಸದಸ್ಯರು, ಜಿಲ್ಲಾ ಸಮಿತಿಯ ಸದಸ್ಯರು, ಮೋರ್ಚಾಗಳ ಪದಾಧಿಕಾರಿಗಳು ಸದಸ್ಯರು ಪ್ರಕೋಷ್ಠದ ಪ್ರಮುಖರು, ಶಾಸಕ ರಾಜೇಶ್ ನ್ಯಾಕ್ ಉಳಿಪ್ಪಾಡಿ ಯವರ ನೇತೃತ್ವದಲ್ಲಿ

ಭಗವಹಿಸಲಿದ್ದೇವೆ ಎಂದರು.

ಬಾಂಗ್ಲಾದ ಈ ಅಹಿತಕರ ಬೆಳವಣಿಗೆಯ ವಿರುದ್ಧ ಇಡೀ ದೇಶದಲ್ಲಿ ಸಂಘ ಪರಿವಾರ ಸಂಘಟನೆ ಪ್ರತಿಭಟನೆ ನಡೆಸುತ್ತಿದ್ದು, ಹಿಂದೂ ಹಿತರಕ್ಷಣಾ ಸಮಿತಿ ದ.ಕ.ಜಿಲ್ಲೆಯ ವತಿಯಿಂದ ನಡೆಯುವ ಬೃಹತ್ ಪ್ರತಿಭಟನೆ ಪರಿಣಾಮಕಾರಿಯಾಗಿ ಮೂಡಿಬರಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಪ್ರಮುಖರಾದ , ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು, ಮಂಡಲ ಕಾರ್ಯದರ್ಶಿಗಳಾದ ಶಿವಪ್ರಸಾದ್ ಶೆಟ್ಟಿ, ಸುದರ್ಶನ್ ಬಜ, ಮಾಧ್ಯಮ ಪ್ರಮುಖ್ ಪುರುಷೋತ್ತಮ ಶೆಟ್ಟಿ ವಾಮದಪದವು ಮತ್ತಿತರರು ಉಪಸ್ಥಿತರಿದ್ದರು.

Leave a Comment