ಬೋಳಂತೂರು:ಇಡಿ ಅಧಿಕಾರಿಗಳಂತೆ ನಟಿಸಿ ಮನೆಗೆ ದಾಳಿ, ಬರೋಬ್ಬರಿ 30ಲಕ್ಷ ದೋಚಿ ಪರಾರಿ

Coastal Bulletin
ಬೋಳಂತೂರು:ಇಡಿ ಅಧಿಕಾರಿಗಳಂತೆ ನಟಿಸಿ ಮನೆಗೆ ದಾಳಿ, ಬರೋಬ್ಬರಿ 30ಲಕ್ಷ ದೋಚಿ ಪರಾರಿ

ಬಂಟ್ವಾಳ :ಇಡಿ ಅಧಿಕಾರಿಗಲೆಂದು ನಂಬಿಸಿ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶದ ಉದ್ಯಮಿಯ ಮನೆಗೆ ದಾಳಿ ನಡೆಸಿದ ತಂಡವೊಂದು ಬರೋಬ್ಬರಿ 30 ಲಕ್ಷ ರೂ. ದೋಚಿದ ಘಟನೆ ಜ.3 ರ ಶುಕ್ರವಾರ ತಡರಾತ್ರಿ ಬೆಳಕಿಗೆ ಬಂದಿದೆ.

ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿನ ನಿವಾಸಿ ಸುಲೈಮಾನ್ ಹಾಜಿ ಎಂಬವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ಶುಕ್ರವಾರ ತಡರಾತ್ರಿ ಅವರ ಮನೆಗೆ ತಮಿಳುನಾಡು ಮೂಲದ ಕಾರಿನಲ್ಲಿ ಆಗಮಿಸಿದ ತಂಡವೊಂದು ದಾಳಿ ನಡೆಸಿದಂತೆ ನಟಿಸಿದೆ.

ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಸುಮಾರು ಎರಡು ಗಂಟೆಗಳ ವರೆಗೆ ತನಿಖೆ ನಡೆಸಿದ ನಾಟಕ ಮಾಡಿ ಮನೆಯಲ್ಲಿ ಸಿಕ್ಕಿದ ಸುಮಾರು 30 ಲಕ್ಷ ದೋಚಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ವಿಟ್ಲ ಪೊಲೀಸ್ ಉನ್ನತ ಅಧಿಕಾರಿಗಳು ಭೇಟಿ ಪರಿಶೀಲಿಸುತ್ತಿದ್ದಾರೆ.

Leave a Comment